ಜೆಡಿಎಸ್ ಅಂಗಳಕ್ಕೆ ಹಳೇ ಹುಲಿಗಳ ಮರಳುವಿಕೆ: ಕರಾವಳಿಯಲ್ಲಿ ಪಕ್ಷಕ್ಕೆ ಹೊಸ ಚೈತನ್ಯ

ಮಂಗಳೂರು/ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಜೆಡಿಎಸ್ನ ಹಿರಿಯ ಮುಖಂಡರಾದ ಶಶಿರಾಜ್ ಶೆಟ್ಟಿ ಕೊಳಂಬೆ ಹಾಗೂ ಯೋಗಿಶ್ ಶೆಟ್ಟಿ ಜಪ್ಪು ಅವರು ಅಧಿಕೃತವಾಗಿ ಮಾತೃ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದಾರೆ. ಈ ಸೇರ್ಪಡೆಯು ಮುಂಬರುವ ದಿನಗಳಲ್ಲಿ ಕರಾವಳಿ ಭಾಗದಲ್ಲಿ ಪ್ರಾದೇಶಿಕ ಪಕ್ಷದ ಸಂಘಟನೆಗೆ ದೊಡ್ಡ ಬಲ ನೀಡುವ ನಿರೀಕ್ಷೆಯಿದೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಎಚ್.ಡಿ. ದೇವೇಗೌಡರ ಆಶೀರ್ವಾದದೊಂದಿಗೆ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ.
ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ, ಎಂ.ಬಿ. ಸದಾಶಿವ, ಜಾಕೆ ಮಾದವ ಗೌಡ, ಮೊಹಿದ್ದಿನ್ ಬಾವ ಸೇರಿದಂತೆ ಪ್ರಮುಖ ನಾಯಕರು ಹಾಜರಿದ್ದರು.
ಗ್ರಾಮೀಣ ಮಟ್ಟದಲ್ಲಿ ಸಂಘಟನೆ ಬಲಪಡಿಸುವುದು ಹಾಗೂ ಯುವಜನರನ್ನು ರಾಜಕೀಯದ ಮುಖ್ಯವಾಹಿನಿಗೆ ತರುವುದು.
ಇದೇ ವೇಳೆ ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ. ಸದಾಶಿವ, ರಾಜ್ಯ ಸರ್ಕಾರದ ಇತ್ತೀಚಿನ ಬಜೆಟ್ ಅನ್ನು “ಕರಾವಳಿ ವಿರೋಧಿ” ಎಂದು ಟೀಕಿಸಿದರು. ಕರಾವಳಿಯ ಜ್ವಲಂತ ಸಮಸ್ಯೆಗಳನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಅವರು ಆರೋಪಿಸಿದರು.
ಕರಾವಳಿ ಕರ್ನಾಟಕ ರಾಜ್ಯದ ಬೊಕ್ಕಸಕ್ಕೆ ದೊಡ್ಡ ಕೊಡುಗೆ ನೀಡುತ್ತಿದೆ. ಆದರೆ, ಈ ಬಜೆಟ್ನಲ್ಲಿ ಇಲ್ಲಿನ ರೈತರು, ಮೀನುಗಾರರು ಮತ್ತು ಶ್ರಮಿಕ ವರ್ಗದ ನಿರೀಕ್ಷೆಗಳು ಹುಸಿಯಾಗಿವೆ.”
— ಎಂ.ಬಿ. ಸದಾಶಿವ, ಜೆಡಿಎಸ್ ರಾಜ್ಯ ವಕ್ತಾರ
ಶಶಿರಾಜ್ ಶೆಟ್ಟಿ ಮತ್ತು ಯೋಗಿಶ್ ಶೆಟ್ಟಿ ಅವರ ಅನುಭವ ಹಾಗೂ ಯುವಶಕ್ತಿಯ ಸಮನ್ವಯದೊಂದಿಗೆ, ಕರಾವಳಿ ಭಾಗದಲ್ಲಿ ಜೆಡಿಎಸ್ ತನ್ನ ಅಸ್ತಿತ್ವವನ್ನು ಮರಳಿ ಸ್ಥಾಪಿಸಲು ಸಜ್ಜಾಗಿದೆ. ವಿಶೇಷವಾಗಿ ವಿದ್ಯಾರ್ಥಿ ಸಂಘಟನೆ ಮತ್ತು ಗ್ರಾಮೀಣ ಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸಲು ಪಕ್ಷವು ಮಾಸ್ಟರ್ ಪ್ಲಾನ್ ರೂಪಿಸಿದೆ.
ವರದಿ :- ಆಂಟೋನಿ ಪತ್ರಕರ್ತ



