Crime Newsಕ್ರೈಂ ಸುದ್ದಿಜಿಲ್ಲಾ ಸುದ್ದಿರಾಜ್ಯ ಸುದ್ದಿಸ್ಥಳೀಯ ಸುದ್ದಿಗಳು

ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ: ಮಹಿಳೆಯ ಕಾಲಿನ ಮೇಲೆ ಹಾಯ್ದ ಕೆಎಸ್‌ಆರ್‌ಟಿಸಿ ಬಸ್!

Share News

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂದು (ಮಾ. 21) ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಮಹಿಳೆಯ ಕಾಲಿನ ಮೇಲೆ ಹಾಯ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ನಿವಾಸಿ ಚನ್ನವ್ವ ಹಡಪದ (50) ಗಾಯಗೊಂಡ ದುರ್ದೈವಿ. ಇವರು ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೇಟಗೇರಿ ಡಿಪೋದಿಂದ ಬೆಂಗಳೂರು ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಬಸ್ ಡಿಕ್ಕಿಯಾದ ರಭಸಕ್ಕೆ ಚನ್ನವ್ವ ಅವರು ನೆಲಕ್ಕೆ ಉರುಳಿದ್ದಾರೆ. ಈ ವೇಳೆ ಬಸ್‌ನ ಚಕ್ರ ಅವರ ಕಾಲಿನ ಮೇಲೆ ಹಾಯ್ದಿದ್ದು, ಕಾಲು ಸಂಪೂರ್ಣ ಜಜ್ಜಲ್ಪಟ್ಟಿದೆ. ಅಲ್ಲದೆ, ತಲೆಯ ಭಾಗಕ್ಕೂ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ತಕ್ಷಣವೇ ಸ್ಥಳೀಯರು ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.

​ಆದರೆ, ಗಾಯದ ತೀವ್ರತೆ ಹೆಚ್ಚಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಗದಗಿನ ಜಿಮ್ಸ್ (GIMS) ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಸ್ತುತ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಲಕ್ಷ್ಮೇಶ್ವರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕವಾಗಿ ತಿಳಿದುಬಂದಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

​ಬಸ್ ನಿಲ್ದಾಣದಂತಹ ಜನನಿಬಿಡ ಪ್ರದೇಶಗಳಲ್ಲಿ ಚಾಲಕರು ಜಾಗರೂಕತೆಯಿಂದ ವಾಹನ ಚಲಾಯಿಸಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!