ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿರಾಜ್ಯ ಸುದ್ದಿ

ಐದು ತಿಂಗಳಿಂದ ನಾಪತ್ತೆಯಾಗಿದ್ದ ಯುವಕನ ಪತ್ತೆ: ಶಿರಸಿ ನಗರ ಪೊಲೀಸರ ಯಶಸ್ವಿ ಕಾರ್ಯಾಚರಣೆ

Share News

ಶಿರಸಿ: ಕಳೆದ ಐದು ತಿಂಗಳಿಂದ ನಾಪತ್ತೆಯಾಗಿದ್ದ ಶಿರಸಿ ತಾಲೂಕಿನ ಹುಲೇಕಲ್ ಗ್ರಾಮದ ಯುವಕನನ್ನು ಪತ್ತೆ ಹಚ್ಚುವಲ್ಲಿ ಶಿರಸಿ ನಗರ ಪೊಲೀಸ್ ಠಾಣೆಯ ತಂಡ ಯಶಸ್ವಿಯಾಗಿದೆ.

ಶಿರಸಿ ತಾಲೂಕಿನ ಹುಲೇಕಲ್ ಗ್ರಾಮದ ನಿವಾಸಿ ರೋಹಿತಾಶ್ವ ಶಿವಾನಂದ ನೇತ್ರಕರ (31) ಎಂಬುವವರು ಕಳೆದ ನವೆಂಬರ್ 8, 2025 ರಿಂದ ನಾಪತ್ತೆಯಾಗಿದ್ದರು. ಈ ಕುರಿತು ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಪ್ರಕರಣ ದಾಖಲಾಗಿತ್ತು. ತನಿಖೆ ಮುಂದುವರಿಸಿದ್ದ ಪೊಲೀಸರು, ಏಪ್ರಿಲ್ 06, 2026 ರಂದು ಖಚಿತ ಮಾಹಿತಿಯ ಮೇರೆಗೆ ಶಿರಸಿಯಲ್ಲೇ ಯುವಕನನ್ನು ಪತ್ತೆ ಹಚ್ಚಿ ಸುರಕ್ಷಿತವಾಗಿ ಕರೆತಂದಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಜಿ. ಕೃಷ್ಣಮೂರ್ತಿ ಮತ್ತು ಜಗದೀಶ್ ಎಂ., ಹಾಗೂ ಶಿರಸಿ ಉಪವಿಭಾಗದ ಡಿವೈಎಸ್‌ಪಿ ಗೀತಾ ಪಾಟೀಲ್, ಸಿಪಿಐ ಶಶಿಕಾಂತ ವರ್ಮಾ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.

​ಪತ್ತೆ ಕಾರ್ಯದಲ್ಲಿ ಶಿರಸಿ ನಗರ ಠಾಣೆಯ ಪಿಎಸ್‌ಐಗಳಾದ ನರಸಿಂಹಲು ಹಾಗೂ ನಾರಾಯಣ ರಾಠೋಡ ನೇತೃತ್ವದ ತಂಡದಲ್ಲಿ ಸಿಬ್ಬಂದಿಗಳಾದ ಸದ್ದಾಂ ಹುಸೇನ್ ಬಿ., ರಾಮಯ್ಯ ಪೂಜಾರಿ, ಹನುಮಂತ ಮಾಕಪುರ, ಚನ್ನಬಸಪ್ಪ ಕ್ಯಾರಕಟ್ಟಿ ಮತ್ತು ಸುನಿಲ್ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಪೊಲೀಸರ ಈ ತ್ವರಿತ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!