ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜಕೀಯರಾಜ್ಯ ಸುದ್ದಿ

ಆಸ್ಪತ್ರೆ, ಶಾಲಾ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ನಿಷೇಧಕ್ಕೆ ಸರ್ಕಾರ ಚಿಂತನೆ: ಆರೋಗ್ಯ ಸಚಿವ ಯು.ಟಿ. ಖಾದರ್ ಖಡಕ್ ನಿರ್ಧಾರ

Share News

ಮಂಗಳೂರು: ರಾಜ್ಯದ ಎಲ್ಲಾ ಆಸ್ಪತ್ರೆ ಹಾಗೂ ಶಾಲಾ ಆವರಣಗಳಲ್ಲಿರುವ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ (ಅನಾ ಆರೋಗ್ಯಕರ ಆಹಾರ) ಮಾರಾಟ ಸಂಪೂರ್ಣ ನಿಷೇಧಿಸಿ, ಕೇವಲ ಆರೋಗ್ಯಕರ ಆಹಾರಗಳನ್ನು ಕನಿಷ್ಠ ದರದಲ್ಲಿ ಮಾರಾಟ ಮಾಡಲು ನಿಯಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

​ಮಂಗಳೂರಿನ ವೆನ್ಲಾಕ್ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಕುಂದುಕೊರತೆ ಹಾಗೂ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

​ಆರೋಗ್ಯ ರಕ್ಷಣೆ: ಆಸ್ಪತ್ರೆ ಹಾಗೂ 1ರಿಂದ 10ನೇ ತರಗತಿವರೆಗಿನ ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಅವಲಂಬನೆ ಹೆಚ್ಚುತ್ತಿದ್ದು, ಇದು ಕ್ಯಾನ್ಸರ್, ಮೂತ್ರಪಿಂಡದಂತಹ ಸಾಂಕ್ರಾಮಿಕವಲ್ಲದ ಕಾಯಿಲೆಗಳಿಗೆ ದಾರಿಯಾಗುತ್ತಿದೆ. ಇದನ್ನು ಆರಂಭಿಕ ಹಂತದಲ್ಲೇ ತಡೆಯಲು ಈ ನಿಯಮ ರೂಪಿಸಲಾಗುತ್ತಿದೆ.

​ಆಹಾರ ಸುರಕ್ಷತಾ ಕಾಯ್ದೆ: ಆಹಾರ ಮತ್ತು ಸುರಕ್ಷತಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುವುದು. ಮಾಲ್ ಸೇರಿದಂತೆ ವಿವಿಧೆಡೆ ಮಾರಾಟವಾಗುವ ಆಹಾರ ಧಾನ್ಯ/ವಸ್ತುಗಳ ಗುಣಮಟ್ಟ ತಪಾಸಣೆ ನಡೆಸಿ, ಕಳಪೆ ಆಹಾರ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

​ಆಹಾರ ಪರೀಕ್ಷಾ ಪ್ರಯೋಗಾಲಯ ಮೇಲ್ದರ್ಜೆಗೆ: ಬೆಂಗಳೂರಿನಲ್ಲಿರುವ ಆಹಾರ ಗುಣಮಟ್ಟ ತಪಾಸಣಾ ಲ್ಯಾಬ್ ಅನ್ನು ಪಿಪಿಪಿ (PPP) ಮಾದರಿಯಲ್ಲಿ ಅತ್ಯುತ್ಕೃಷ್ಟ ಮಟ್ಟಕ್ಕೆ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ.

​ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆಯಾದರೂ, ಪ್ರತಿಯೊಬ್ಬ ರೋಗಿಯ ಚಿಕಿತ್ಸೆಗೆ ಸರ್ಕಾರ ಎಷ್ಟು ವೆಚ್ಚ ಮಾಡುತ್ತಿದೆ ಎಂಬ ಅರಿವು ಮೂಡಿಸಲು ಹೊಸ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.

​ಚಿಕಿತ್ಸೆ ಪಡೆದು ನಿರ್ಗಮಿಸುವ ರೋಗಿಗಳಿಗೆ ಅವರು ಪಡೆದ ಚಿಕಿತ್ಸೆಯ ಒಟ್ಟು ವೆಚ್ಚದ ವಿವರವಿರುವ ‘ಮೊತ್ತ ಪಾವತಿ ರಹಿತ ಬಿಲ್’ (Zero Bill) ನೀಡಲಾಗುವುದು. ಈ ಮಾದರಿಯನ್ನು ಪ್ರಾಯೋಗಿಕವಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ಆರಂಭಿಸಿ, ಬಳಿಕ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!