ರಾಜ್ಯ ಸುದ್ದಿಕ್ರೈಂ ಸುದ್ದಿಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಮಡಿಕೇರಿ: ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ, ಅರಣ್ಯ ಸಿಬ್ಬಂದಿ ಗುಂಡಿನ ಚಕಮಕಿ – ಇಬ್ಬರು ಆರೋಪಿಗಳಿಗೆ ಗಾಯ

Share News

ಮಡಿಕೇರಿ: ತಾಲೂಕಿನ ಕಾಲೂರು ಗ್ರಾಮದ ಬಳಿ ಕಾಡುಕೋಣವನ್ನು ಅಕ್ರಮವಾಗಿ ಬೇಟೆಯಾಡಿ ಜೀಪಿನಲ್ಲಿ ಮಾಂಸ ಸಾಗಾಟ ಮಾಡುತ್ತಿದ್ದ ಬೇಟೆಗಾರರ ತಂಡ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಆರೋಪಿಗಳು ಗಾಯಗೊಂಡಿದ್ದಾರೆ.

​ಅರಣ್ಯ ಇಲಾಖೆ ಸಿಬ್ಬಂದಿ ಸಕಾಲದಲ್ಲಿ ನಡೆಸಿದ ಜಾಗರೂಕ ಕಾರ್ಯಾಚರಣೆಯಿಂದ ಅಕ್ರಮ ಬೇಟೆ ಜಾಲವನ್ನು ಭೇದಿಸಲಾಗಿದೆ.

​ಕಾಲೂರು ಗ್ರಾಮದ ವ್ಯಾಪ್ತಿಯಲ್ಲಿ ಕಾಡುಕೋಣವನ್ನು ಕೊಂದು, ಅದರ ಮಾಂಸವನ್ನು ಜೀಪಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು.

​ಈ ವೇಳೆ ತಪಾಸಣೆಗೆ ಮುಂದಾದ ಸಿಬ್ಬಂದಿಯನ್ನು ಕಂಡು ಪರಾರಿಯಾಗಲು ಯತ್ನಿಸಿದ ಆರೋಪಿಗಳ ಜೀಪಿನ ಮೇಲೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಆರೋಪಿಗಳು ಗಾಯಗೊಂಡಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ.

​ಕಾರ್ಯಾಚರಣೆ ವೇಳೆ ಅರಣ್ಯಾಧಿಕಾರಿಗಳು ಆರೋಪಿಗಳು ಬಳಸಿದ್ದ ಜೀಪ್, ಕಾಯ್ದಿರಿಸಿದ ಕಾಡುಕೋಣದ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಮಾರಕ ಆಯುಧಗಳು ಮತ್ತು ಇತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

​ಈ ಸಂಬಂಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು, ಘಟನೆಯಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳ ಪತ್ತೆಗಾಗಿ ತನಿಖೆ ತೀವ್ರಗೊಳಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!