ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸ್ಥಳೀಯ ಸುದ್ದಿಗಳು

ಕೌಟುಂಬಿಕ ಕಲಹಕ್ಕೆ ಹೆಂಡತಿ, ಇಬ್ಬರು ಕಂದಮ್ಮಗಳನ್ನು ಕೊಂದ ಗಂಡ – ತಾನೂ ಆತ್ಮಹತ್ಯೆ

Share News

ಹುಣಸೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನೊಬ್ಬ ತನ್ನ ಹೆಂಡತಿ ಹಾಗೂ ಇಬ್ಬರು ಮುದ್ದಾದ ಹೆಣ್ಣು ಮಕ್ಕಳನ್ನು ಭೀಕರವಾಗಿ ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನ ಮಾರುತಿ ಬಡಾವಣೆಯಲ್ಲಿ ನಡೆದಿದೆ.

ಮನೆಯ ಯಜಮಾನ ಹರೀಶ್ ಎಂಬಾತನೇ ಈ ಘೋರ ಕೃತ್ಯ ಎಸಗಿದ ವ್ಯಕ್ತಿ. ಈತನ ಹೆಂಡತಿ ನಿಶ್ಚಿತಾ, 7ನೇ ತರಗತಿ ಓದುತ್ತಿದ್ದ ಹಿರಿಯ ಮಗಳು ನೆಕ್ಸಾ ಹಾಗೂ 1ನೇ ತರಗತಿ ಓದುತ್ತಿದ್ದ ಕಿರಿಯ ಮಗಳು ರಕ್ಷಾ ಹತ್ಯೆಗೀಡಾದ ದುರ್ದೈವಿಗಳು.

​ಆರೋಪಿ ಹರೀಶ್, ಹೆಂಡತಿ ಮತ್ತು ಇಬ್ಬರು ಮಕ್ಕಳ ಬಾಯಿ ಹಾಗೂ ಮೂಗಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ತಾನೂ ನೇಣಿಗೆ ಶರಣಾಗಿ ಜೀವ ಬಿಟ್ಟಿದ್ದಾನೆ. ಈ ಘಟನೆಯಿಂದ ಇಡೀ ಹುಣಸೂರು ನಗರವೇ ತೀವ್ರ ಆಘಾತಕ್ಕೊಳಗಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಮಲ್ಲಿಕಾರ್ಜುನ ಬಾಲದಂಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

​ಕೌಟುಂಬಿಕ ಜಗಳವೇ ಈ ದಾರುಣ ಕೃತ್ಯಕ್ಕೆ ಮೂಲ ಕಾರಣ ಎನ್ನಲಾಗಿದ್ದು, ಈ ಕುರಿತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಹರೀಶ್ ಈ ಮಟ್ಟದ ತೀವ್ರ ನಿರ್ಧಾರ ಕೈಗೊಳ್ಳಲು ನಿಜವಾದ ಕಾರಣವೇನು ಎಂಬ ಬಗ್ಗೆ ಸುದೀರ್ಘ ತನಿಖೆ ನಡೆಸುತ್ತಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!