ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಭದ್ರಾವತಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ 3 ವರ್ಷ ಜೈಲು, ₹31,000 ದಂಡ

Share News

ಶಿವಮೊಗ್ಗ: ಭದ್ರಾವತಿ ತಾಲೂಕಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (FTSC-1) ಆರೋಪಿಗೆ 3 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹31,000 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

2024ರಲ್ಲಿ ಭದ್ರಾವತಿ ತಾಲೂಕಿನ 20 ವರ್ಷದ ಯುವಕನೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದನು. ಈ ಕುರಿತು ಸಂತ್ರಸ್ತ ಬಾಲಕಿ ನೀಡಿದ ದೂರಿನ ಮೇರೆಗೆ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಕೈಗೊಂಡಿದ್ದ ಆಗಿನ ತನಿಖಾಧಿಕಾರಿ, ಪಿಎಸ್ಐ ಶ್ರೀಮತಿ ಕವಿತಾ ಇ. ಅವರು ನ್ಯಾಯಾಲಯಕ್ಕೆ ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ದೋಷಾರೋಪಣಾ ಪತ್ರ (ಚಾರ್ಜ್‌ಶೀಟ್) ಸಲ್ಲಿಸಿದ್ದರು.

​ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (FTSC-1) ಮಾನ್ಯ ನ್ಯಾಯಾಧೀಶರಾದ ಶ್ರೀ ನಿಂಗನಗೌಡ ಭ. ಪಾಟೀಲ್ ಅವರು, ಜುಲೈ 23, 2026ರಂದು ಆರೋಪಿ ಮೇಲಿನ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ 3 ವರ್ಷಗಳ ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ.

​ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀ ಶ್ರೀಧರ್ ಅವರು ಸಫಲವಾಗಿ ವಾದ ಮಂಡಿಸಿದ್ದರು. ಅತ್ಯುತ್ತಮ ರೀತಿಯಲ್ಲಿ ತನಿಖೆ ನಡೆಸಿ ಆರೋಪಿಗೆ ಶಿಕ್ಷೆಯಾಗುವಂತೆ ಮಾಡಿದ ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತವಾಗಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!