ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು
ಟ್ರ್ಯಾಕ್ಟರ್ ಮಾಲೀಕರು ಹಾಗೂ ಚಾಲಕರಿಗೆ ಸಿಪಿಐ, ಪಿಎಸ್ಐ ಸೂಚನೆ – ದಾಖಲೆ ನವೀಕರಣಕ್ಕೆ ಜಾಗೃತಿ ಸಭೆ

ಬೇತಮಂಗಲ: ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯ ಟ್ರ್ಯಾಕ್ಟರ್ ಮಾಲೀಕರು ಮತ್ತು ಚಾಲಕರ ಸಭೆ ಕರೆದ ಸಿ.ಪಿ.ಐ ಹಾಗೂ ಪಿ.ಎಸ್.ಐ ಅವರು ವಾಹನಗಳ ಸುರಕ್ಷತೆ ಮತ್ತು ಕಾನೂನು ನಿಯಮಾವಳಿಗಳ ಕುರಿತು ಜಾಗೃತಿ ಮೂಡಿಸಿದರು.
ಸಭೆಯಲ್ಲಿ ಮಾತನಾಡಿದ ಅಧಿಕಾರಿಗಳು, ಪ್ರತಿಯೊಬ್ಬ ಟ್ರ್ಯಾಕ್ಟರ್ ಮಾಲೀಕರು ತಮ್ಮ ವಾಹನಗಳಿಗೆ ಕಡ್ಡಾಯವಾಗಿ ಚಾಲ್ತಿಯಲ್ಲಿರುವ ಇನ್ಶೂರೆನ್ಸ್ (ವಿಮೆ) ಹಾಗೂ ಎಫ್ಸಿ (ಫಿಟ್ನೆಸ್ ಸರ್ಟಿಫಿಕೇಟ್) ಮಾಡಿಸಿಟ್ಟುಕೊಳ್ಳಬೇಕು ಎಂದು ಸೂಚಿಸಿದರು. ಚಾಲನೆ ವೇಳೆಯಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸುವುದು ಅತ್ಯಗತ್ಯವಾಗಿದ್ದು, ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೆ ತಮ್ಮ ಹಾಗೂ ಸಾರ್ವಜನಿಕರ ಜೀವ ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಹೇಳಿದರು.
ಈ ಸಂದರ್ಭದಲ್ಲಿ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹಲವು ಟ್ರ್ಯಾಕ್ಟರ್ ಮಾಲೀಕರು, ಚಾಲಕರು ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.



