ಉಪಯುಕ್ತ ಮಾಹಿತಿಗಳುಕ್ರೈಂ ಸುದ್ದಿಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ದೇವಾಲಯದ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ: 8 ಮಂದಿ ಬಂಧನ, ಮುಂಜಾಗ್ರತಾ ಕ್ರಮವಾಗಿ ಸಿ.ಸಿ. ಕ್ಯಾಮರಾ, ಗಸ್ತು ವ್ಯವಸ್ಥೆ!

Share News

ಸಿದ್ದಾಪುರ (ಕೊಡಗು): ಮಾಲ್ದಾರೆ ಸಮೀಪದ ಮೀಸಲು ಅರಣ್ಯ ಪ್ರದೇಶದೊಳಗೆ ಇರುವ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಅನ್ಯಕೋಮಿನವರು ಅಕ್ರಮವಾಗಿ ಗೋರಿ ನಿರ್ಮಾಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

​ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಜುಲೈ 26 ರಂದು ಗೋರಿ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳು ಸ್ಥಳದಲ್ಲಿ ಪ್ರತಿಭಟನೆ ನಡೆಸಿ, ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸಿದ್ದಾಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದವು.

​ದೂರಿನ ಅನ್ವಯ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಹಾಗೂ ಮಡಿಕೇರಿ ಡಿ.ವೈ.ಎಸ್ಪಿ ಸೂರಜ್ ಮಾರ್ಗದರ್ಶನದಲ್ಲಿ, ಸಿ.ಐ. ಚಂದ್ರಶೇಖ‌ರ್ ಮತ್ತು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದ ಪೊಲೀಸ್ ತಂಡ ತನಿಖೆ ನಡೆಸಿ ಪಿರಿಯಾಪಟ್ಟಣ ತಾಲೂಕಿನ ಆಯಾರಬೀಡು ಗ್ರಾಮದ ನಿವಾಸಿಗಳನ್ನು ಬಂಧಿಸಿದೆ.

​ಬಂಧಿತ ಆರೋಪಿಗಳು: ಮುಜಾಮಿಲ್ (32), ಅಶ್ವಿಕ್ ಪಾಷ (28), ರಶೀದ್ ಖಾನ್ (30), ಸೈಯದ್ ಸಾಧಿಕ್ (34), ಆಲಂ ಶರೀಫ್ (19), ತಂಜೀವ್ ಪಾಷ (30), ಮನ್ಸೂರ್ ಪಾಷ (33) ಹಾಗೂ ನಿಸಾರ್ ಅಹ್ಮದ್ (33).

​ಘಟನೆಗೆ ಸಂಬಂಧಿಸಿದಂತೆ ಅರಣ್ಯ ಪ್ರದೇಶಕ್ಕೆ ಆಗಮಿಸಲು ಬಳಸಿದ್ದ ಎರಡು ವಾಹನಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

​ಘಟನೆ ಬೆನ್ನಲ್ಲೇ ದೇವಾಲಯದ ರಸ್ತೆಯಲ್ಲಿ ಸಿ.ಸಿ. ಕ್ಯಾಮರಾ ಅಳವಡಿಸಲು ಹಿಂದೂ ಸಂಘಟನೆಗಳು ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ದೇವಾಲಯಕ್ಕೆ ತೆರಳುವ ರಸ್ತೆ ಬದಿಯಲ್ಲಿ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಮೀಸಲು ಅರಣ್ಯ ಪ್ರದೇಶಕ್ಕೆ ಅನಧಿಕೃತ ಪ್ರವೇಶ ತಡೆಯಲು ಹಗಲಿನ ವೇಳೆ ಕಾವಲು ಕಾಯಲು 2 ಸಿಬ್ಬಂದಿ ಹಾಗೂ ರಾತ್ರಿ ವೇಳೆ ಗಸ್ತು ತಿರುಗಲು ಅರಣ್ಯ ಇಲಾಖೆ ವಾಹನದೊಂದಿಗೆ 2 ಸಿಬ್ಬಂದಿಯನ್ನು ಪ್ರತ್ಯೇಕವಾಗಿ ನಿಯೋಜಿಸಲಾಗಿದೆ.

​ಅಲ್ಲದೆ, ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮ ಪ್ರವೇಶ ಮಾಡಿದ ಹಿನ್ನೆಲೆಯಲ್ಲಿ ಕೆಲವರ ವಿರುದ್ಧ ಕುಶಾಲನಗರ ವಲಯ ಅರಣ್ಯ ಅಧಿಕಾರಿಗಳು (RFO) ಕೂಡ ಪ್ರತ್ಯೇಕ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!