ಉಪಯುಕ್ತ ಮಾಹಿತಿಗಳುಕ್ರೈಂ ಸುದ್ದಿಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಬಸರಕೋಡದ ಪವಾಡ ಬಸವೇಶ್ವರ ದೇಗುಲದ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಗುಜರಾತ್ ಮೂಲದ ಮೂವರು ಮೂರ್ತಿಚೋರರ ಬಂಧನ!

Share News

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಪ್ರಸಿದ್ಧ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಾಲಯದಲ್ಲಿ ನಡೆದಿದ್ದ ಭಾರಿ ಮೊತ್ತದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮೂಲದ ಮೂವರು ಖತರ್ನಾಕ್ ಮೂರ್ತಿಚೋರರನ್ನು ಬಂಧಿಸಲಾಗಿದೆ.

​₹51 ಲಕ್ಷ ಮೌಲ್ಯದ ಬೆಳ್ಳಿ ವಶ:

ಬಂಧಿತ ಆರೋಪಿಗಳಿಂದ ಸುಮಾರು ₹51 ಲಕ್ಷ ಮೌಲ್ಯದ 32 ಕೆ.ಜಿ ಬೆಳ್ಳಿ ಆಭರಣ ಹಾಗೂ ಮೂರ್ತಿಗಳಿಗೆ ಸಂಬಂಧಿಸಿದಂತೆ, 23 ಕೆ.ಜಿ ತೂಕದ ಕರಗಿಸಿದ ಬೆಳ್ಳಿ ಗಟ್ಟಿ, 4 ಕೆ.ಜಿ ತೂಕದ ಮೂರ್ತಿಯ ಕತ್ತರಿಸಿದ ತುಂಡುಗಳು, ₹67,000 ನಗದು ಹಣ ಹಾಗೂ ಕೃತ್ಯ ಎಸಗಲು ಬಳಸಿದ್ದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

​ಸುಮಾರು 32 ಕೆ.ಜಿ ತೂಕದ ಬೆಳ್ಳಿ ಮೂರ್ತಿಗಳನ್ನು ಕದ್ದು ಪರಾರಿಯಾಗಿದ್ದ ಆರೋಪಿಗಳ ಜಾಲವನ್ನು ಜಾಲಾಡಿದ ಪೊಲೀಸರು, ಅತ್ಯಂತ ಚಾಣಾಕ್ಷತನದಿಂದ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಬಂಧಿಸುವಲ್ಲಿ ಯಶಸ್ಸು ಕಂಡಿದ್ದಾರೆ. ಈ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!