ರಾಜ್ಯ ಸುದ್ದಿಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುರಾಜಕೀಯಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು
ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎ.ಎಸ್. ಪೊನ್ನಣ್ಣ ನೇಮಕ: ಕೊಡಗು ಜಿಲ್ಲೆಗೆ ಒಲಿದ ಐತಿಹಾಸಿಕ ಹೆಗ್ಗಳಿಕೆ!

ವಿರಾಜಪೇಟೆ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಜ್ಜಿಕುಟ್ಟಿರ ಎ.ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಕೊಡಗು ಜಿಲ್ಲೆಯ ಶಾಸಕರೊಬ್ಬರು ರಾಜ್ಯ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಂತಹ ಅತ್ಯಂತ ಪ್ರಭಾವಿ ಹಾಗೂ ಮಹತ್ವದ ಹುದ್ದೆಗೆ ನೇಮಕಗೊಂಡಿರುವುದು ಜಿಲ್ಲೆಯ ರಾಜಕೀಯ ಇತಿಹಾಸದಲ್ಲೇ ಇದೇ ಮೊದಲ ಬಾರಿಯಾಗಿದೆ.
ಈ ಪ್ರಮುಖ ಹುದ್ದೆಯ ಮೂಲಕ ಎ.ಎಸ್. ಪೊನ್ನಣ್ಣ ಅವರು ಮುಖ್ಯಮಂತ್ರಿಗಳೊಂದಿಗೆ ನೇರ ಸಮನ್ವಯ ಸಾಧಿಸುವುದು, ರಾಜಕೀಯ ವಿದ್ಯಮಾನಗಳು ಮತ್ತು ಆಡಳಿತಾತ್ಮಕ ವಿಚಾರಗಳಲ್ಲಿ ಪ್ರಮುಖ ಸಲಹೆ ಹಾಗೂ ಸಹಕಾರ ನೀಡುವುದು ಸೇರಿದಂತೆ ವಿವಿಧ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ. ಈ ನೇಮಕಕ್ಕೆ ಕೊಡಗು ಜಿಲ್ಲೆಯ ಸಾರ್ವಜನಿಕರು ಹಾಗೂ ಬೆಂಬಲಿಗರಿಂದ ತೀವ್ರ ಹರ್ಷ ವ್ಯಕ್ತವಾಗಿದೆ.



