ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸ್ಥಳೀಯ ಸುದ್ದಿಗಳು

ಯೂ-ಟರ್ನ್ ಪಡೆಯುತ್ತಿದ್ದ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Share News

ಹೊಸಕೋಟೆ: ಕೋಲಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಳತ್ತೂರು ಗೇಟ್‌ ಬಳಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

​ಮಾಲೂರು ಮೂಲದ ಖಾಸಗಿ ಶಾಲಾ ಬಸ್ ಚಾಲಕ ಸುಬ್ರಮಣಿ (42) ಮೃತಪಟ್ಟ ದುರದೃಷ್ಟಕರ ವ್ಯಕ್ತಿ.

​ಅಪಘಾತ ಸಂಭವಿಸಿದ್ದು ಹೇಗೆ?:

ಸುಬ್ರಮಣಿ ಅವರು ತಮ್ಮ ಬೈಕ್‌ನಲ್ಲಿ ಕೋಲಾರ-ಬೆಂಗಳೂರು ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ಕೊಳತ್ತೂರು ಗೇಟ್ ಬಳಿ ಲಾರಿಯೊಂದು ದಿಢೀರನೆ ಯೂ-ಟರ್ನ್ ಪಡೆಯಲು ಬಂದಿದೆ. ಈ ವೇಳೆ ಲಾರಿ ಮತ್ತು ಬೈಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರಿಣಾಮವಾಗಿ ತೀವ್ರ ಗಾಯಗೊಂಡ ಸುಬ್ರಮಣಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

​ಘಟನೆ ನಡೆದ ಸ್ಥಳಕ್ಕೆ ಹೊಸಕೋಟೆ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!