ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು
ಮೈಸೂರು ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ಸಂಚಾರ ಜಾಗೃತಿ ಕಾರ್ಯಕ್ರಮ

ಮೈಸೂರು: ನಗರದ ನರಸಿಂಹರಾಜ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ಇಲ್ಲಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ರಸ್ತೆ ಸುರಕ್ಷತೆ ಮತ್ತು ಸಂಚಾರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಚಾರ ಠಾಣೆಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳು ಹಾಗೂ ವಾಹನ ಚಾಲನಾ ನಿಯಮಾವಳಿಗಳ ಕುರಿತು ಸುದೀರ್ಘ ಮಾಹಿತಿ ನೀಡಿದರು. ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದು, ಅತಿವೇಗಕ್ಕೆ ಕಡಿವಾಣ ಹಾಕಿ ಸುರಕ್ಷಿತವಾಗಿ ವಾಹನ ಚಲಾಯಿಸುವುದರ ಮಹತ್ವವನ್ನು ಮನವರಿಕೆ ಮಾಡಿಕೊಟ್ಟರು.
ಪ್ರತಿಯೊಬ್ಬ ವಿದ್ಯಾರ್ಥಿಯೂ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ತಮ್ಮ ಕುಟುಂಬ ಹಾಗೂ ಸಮಾಜದಲ್ಲೂ ರಸ್ತೆ ಸುರಕ್ಷತೆಯ ಕುರಿತು ಅರಿವು ಮೂಡಿಸಲು ಮುಂದಾಗಬೇಕು ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ಪ್ರೇರೇಪಿಸಿದರು.



