ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು
ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಮೂವರು ಕೈದಿಗಳು ಬೀದರ್ ಪೊಲೀಸರ ವಶಕ್ಕೆ

ಕಲಬುರಗಿ: ಕಲಬುರಗಿ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಕೈದಿಗಳನ್ನು ಬೀದರ್ ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಬಂಧಿಸಿ, ಕಲಬುರಗಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಜುಲೈ ೧೪ರಂದು ಕಲಬುರಗಿ ಕಾರಾಗೃಹದಿಂದ ಮೂವರು ಜೈಲು ಹಕ್ಕಿಗಳು ಪರಾರಿಯಾಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತೀವ್ರ ಶೋಧ ಕಾರ್ಯ ಕೈಗೊಂಡಿದ್ದರು. ಕಾರ್ಯಾಚರಣೆಯ ಭಾಗವಾಗಿ ಬೀದರ್ ಪೊಲೀಸರು ಮೊದಲ ಕೈದಿಯನ್ನು ಹುಮನಾಬಾದ್‌ನಲ್ಲಿ ಹಾಗೂ ಎರಡನೇ ಕೈದಿಯನ್ನು ಭಾಲ್ಕಿಯಲ್ಲಿ ಇತ್ತೀಚೆಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಇದೀಗ ಪ್ರಕರಣದ ಮೂರನೇ ಆರೋಪಿ, ಪೊಕ್ಸೊ (POCSO) ಕಾಯ್ದೆಯಡಿ ಶಿಕ್ಷೆಗೆ ಒಳಗಾಗಿದ್ದ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದ ಮಸ್ತಾನ್ ಕಮಲಾಪುರೆ ಎಂಬಾತನನ್ನು ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದಲ್ಲಿ ಪೊಲೀಸರು ಸೆರೆಹಿಡಿದಿದ್ದಾರೆ.
ಬಂಧಿತ ಮೂವರನ್ನೂ ಬೀದರ್ ಪೊಲೀಸರು ಮುಂದಿನ ಕ್ರಮಕ್ಕಾಗಿ ಕಲಬುರಗಿ ಪೊಲೀಸರಿಗೆ ಒಪ್ಪಿಸಿದ್ದಾರೆ.



