ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿ

ಅನಧಿಕೃತ ಪಿಜಿ, ಲೈಬ್ರರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಅಶೋಕ ಧಾಮ ಫೌಂಡೇಶನ್‌ನಿಂದ ಜಿಲ್ಲಾಧಿಕಾರಿಗೆ ಮನವಿ

Share News

ವಿಜಯಪುರ: ನಗರ ಹಾಗೂ ಜಿಲ್ಲೆಯಾದ್ಯಂತ ಯಾವುದೇ ಅಧಿಕೃತ ಅನುಮತಿ ಪಡೆಯದೆ, ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿರುವ ಪಿಜಿ (PG) ಹಾಗೂ ಖಾಸಗಿ ಸ್ಟಡಿ ಲೈಬ್ರರಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಶೋಕ ಧಾಮ ಫೌಂಡೇಶನ್ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

​ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿರುವುದನ್ನೇ ಬಂಡವಾಳ ಮಾಡಿಕೊಂಡು ಹಲವು ಅನಧಿಕೃತ ಪಿಜಿ ಮತ್ತು ಲೈಬ್ರರಿಗಳು ತಲೆಎತ್ತಿವೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಫೌಂಡೇಶನ್‌ ಗೌರವಾಧ್ಯಕ್ಷ ಪ್ರಕಾಶ್ ಮಿರ್ಜಿ, “ಬಹುತೇಕ ಪಿಜಿ ಮತ್ತು ಲೈಬ್ರರಿಗಳು ಪಾಲಿಕೆಯಿಂದ ಪರವಾನಗಿ ಪಡೆದಿಲ್ಲ. ಅಗ್ನಿಶಾಮಕ ಇಲಾಖೆಯ ‘ನಿರಾಕ್ಷೇಪಣಾ ಪತ್ರ’ (NOC), ತುರ್ತು ನಿರ್ಗಮನ ದ್ವಾರ ಹಾಗೂ ಕನಿಷ್ಠ ಸುರಕ್ಷತಾ ವ್ಯವಸ್ಥೆಯೂ ಇಲ್ಲದೆ ಕಿರಿದಾದ ಕಟ್ಟಡಗಳಲ್ಲಿ ಇವುಗಳನ್ನು ನಡೆಸಲಾಗುತ್ತಿದೆ” ಎಂದು ಆರೋಪಿಸಿದರು.

​ಯುವತಿಯರ ಸುರಕ್ಷತೆ ಬಗ್ಗೆ ಆತಂಕ:

ಸಮಾಜ ಸೇವಕ ಸಂಗಮೇಶ ಸಗರ ಮಾತನಾಡಿ, “ಹಲವು ಪಿಜಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳಿಲ್ಲ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಪ್ರವೇಶ-ನಿರ್ಗಮನ ದಾಖಲಿಸುವ ರಿಜಿಸ್ಟರ್ ಪುಸ್ತಕಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಇದರಿಂದ ವಿಶೇಷವಾಗಿ ಯುವತಿಯರ ಸುರಕ್ಷತೆ ಬಗ್ಗೆ ತೀವ್ರ ಆತಂಕ ಮೂಡಿದೆ. ಹೀಗಾಗಿ ಪಾಲಿಕೆ, ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆಗಳು ಜಂಟಿ ತಪಾಸಣೆ ನಡೆಸಿ, ನಿಯಮ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

​ಮನವಿ ಸಲ್ಲಿಸುವ ಸಂದರ್ಭದಲ್ಲಿ ಫೌಂಡೇಶನ್‌ನ ಪದಾಧಿಕಾರಿಗಳಾದ ಮಧೂರ, ಶಶಿಧರ, ಅಭಿಲಾಷ, ಲಖನ್ ಹಾಗೂ ವಿಶ್ವಾರಾಧ್ಯ ವಾಲಿಕಾರ ಉಪಸ್ಥಿತರಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!