ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿ

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ತಾಯಿ-ಮಗಳು ನಾಪತ್ತೆ: ಶೋಧ ಕಾರ್ಯ ತೀವ್ರ

Share News

ವಿಜಯನಗರ: ತುಂಗಭದ್ರಾ ನದಿಯ ಸ್ನಾನಘಟ್ಟದಲ್ಲಿ ಸ್ನಾನ ಮಾಡಲು ತೆರಳಿದ್ದ ತಾಯಿ ಹಾಗೂ ಮಗಳು ನೀರಿನಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿರುವ ಆತಂಕಕಾರಿ ಘಟನೆ ಹಂಪಿ ಪ್ರವಾಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

​ವಿಷಯ ತಿಳಿಯುತ್ತಿದ್ದಂತೆಯೇ ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಪತ್ತೆಯಾಗಿರುವ ತಾಯಿ-ಮಗಳನ್ನು ಶೀಘ್ರವಾಗಿ ಪತ್ತೆಹಚ್ಚಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ನದಿ ಪಾತ್ರದಲ್ಲಿ ತೀವ್ರ ಶೋಧ ನಡೆಸುವಂತೆ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

​ಬಂಧಿತರ ಪತ್ತೆಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ನದಿಯಲ್ಲಿ ಗಾಳ ಹಾಕಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!