ಉಪಯುಕ್ತ ಮಾಹಿತಿಗಳುಕ್ರೈಂ ಸುದ್ದಿಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿ
ಶಿವಮೊಗ್ಗ: ಹರಕೆರೆ ರಿಂಗ್ ರೋಡ್ನಲ್ಲಿ ದರೋಡೆ ಮಾಡಿದ್ದ ಮೂವರು ಖದೀಮರ ಬಂಧನ; ಕಾರು, ನಗದು ಜಪ್ತಿ

ಶಿವಮೊಗ್ಗ: ನಗರದ ಹರಕೆರೆ ರಿಂಗ್ ರೋಡ್ನಲ್ಲಿ ಸಾರ್ವಜನಿಕರಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿ, ಹಲ್ಲೆ ನಡೆಸಿ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ತುಂಗಾನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಅಮಾನ್, ಮೊಹಮ್ಮದ್ ಶೆಹಜಾನ್ ಹಾಗೂ ಹೇಮಂತ ಬಂಧಿತ ಖದೀಮರು.
ಸಾಮಗ್ರಿ ಜಪ್ತಿ:
ಬಂಧಿತ ಆರೋಪಿಗಳಿಂದ ದರೋಡೆ ಮಾಡಿದ್ದ ₹30,500 ನಗದು, 2 ಮೊಬೈಲ್ ಫೋನ್ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ದಾರಿಹೋಕರನ್ನು ತಡೆದು ಬೆದರಿಸಿ, ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ದೋಚಿದ್ದ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಇನ್ಸ್ಪೆಕ್ಟರ್ ಗುರುರಾಜ್ ಕೆ.ಟಿ. ಅವರ ನೇತೃತ್ವದ ಪೊಲೀಸ್ ತಂಡವು ಯಶಸ್ವಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದೆ.



