ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸ್ಥಳೀಯ ಸುದ್ದಿಗಳು

ತಂಗಿಯ ಭೀಕರ ಕೊಲೆ ಪ್ರಕರಣ: ಆರೋಪಿ ಸಹೋದರನಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಕೋರ್ಟ್

Share News

ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವಿನಲ್ಲಿ ಮೊಬೈಲ್ ವಿಚಾರದ ಕ್ಷುಲ್ಲಕ ಕಾರಣಕ್ಕೆ ತಂಗಿಯನ್ನೇ ಕೊಲೆ ಮಾಡಿದ್ದ ಆರೋಪಿ ಸ್ವಾಮ್ಸನ್ ಫ್ರಾನ್ಸಿಸ್ ಕುಟಿನ್ಹಾಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

​ನ್ಯಾಯಾಲಯವು ಆರೋಪಿಗೆ ಐಪಿಸಿ ಸೆಕ್ಷನ್ 304 (II) ಅನ್ವಯ 4 ವರ್ಷಗಳ ಜೈಲು ಶಿಕ್ಷೆ ಹಾಗೂ ₹10,000 ದಂಡ ಮತ್ತು ಕಲಂ 201 ಅನ್ವಯ 1 ವರ್ಷ ಶಿಕ್ಷೆ ಹಾಗೂ ₹1,000 ದಂಡ ವಿಧಿಸಿದೆ.

​ಪ್ರಕರಣದ ವಿವರ ಹಾಗೂ ಮುಖ್ಯಾಂಶಗಳು:

​ಘಟನೆಯ ಹಿನ್ನೆಲೆ: 2019ರ ಅಕ್ಟೋಬರ್ 8ರಂದು ಕಂಬಳಪದವಿನ ತಮ್ಮ ವಾಸದ ಮನೆಯಲ್ಲಿ ಮೊಬೈಲ್ ಫೋನ್ ವಿಚಾರವಾಗಿ ಸ್ವಾಮ್ಸನ್ ಹಾಗೂ ಆತನ ತಂಗಿ ಫಿಯೋನಾ ಸ್ವೀಡಲ್ ಕುಟಿನ್ಹಾ ನಡುವೆ ಮಾತಿನ ಚಕಮಕಿ ನಡೆದಿತ್ತು.

​ಭೀಕರ ಕೃತ್ಯ: ಮಾತಿಗೆ ಮಾತು ಬೆಳೆದು ತೀವ್ರ ಕೋಪಗೊಂಡಿದ್ದ ಆರೋಪಿ ಸ್ವಾಮ್ಸನ್, ತಂಗಿಯ ಮೇಲೆ ಸುತ್ತಿಗೆಯಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದನು. ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ಮನೆಯ ಹಿಂಬದಿಯ ಪೊದೆಯಲ್ಲಿ ಬಚ್ಚಿಟ್ಟಿದ್ದನು.

​ದೂರು ಹಾಗೂ ತನಿಖೆ: ಮಗಳು ಕಾಣೆಯಾಗಿದ್ದ ಬಗ್ಗೆ ತಂದೆ ಫ್ರಾನ್ಸಿಸ್ ಕುಟಿನ್ಹಾ ಕೊಣಾಜೆ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ಮಂಗಳೂರು ದಕ್ಷಿಣ ಉಪವಿಭಾಗದ ಅಂದಿನ ಎಸಿಪಿ ಟಿ. ಕೋದಂಡ ರಾಮ್ ಅವರು ನ್ಯಾಯಾಲಯಕ್ಕೆ ಸುದೀರ್ಘ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

​ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪದ ಮೇಲಿನ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಇದೀಗ ಶಿಕ್ಷೆ ಪ್ರಕಟಿಸಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!