ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಹನೂರು: ರುದ್ರಭೂಮಿ ಇಲ್ಲದೆ ಹಳ್ಳದ ದಂಡೆಯಲ್ಲೇ ಅಂತ್ಯಸಂಸ್ಕಾರ – ಸರ್ಕಾರದ ಗಮನಸೆಳೆದ ರೈತ ಸಂಘಟನೆ

Share News

ಹನೂರು: ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬಿಕಾಪುರ ಗ್ರಾಮದಲ್ಲಿ ಓಬಿಸಿ (OBC) ಸಮುದಾಯಕ್ಕೆ ಸ್ವಂತ ರುದ್ರಭೂಮಿ ಇಲ್ಲದ ಕಾರಣ, ಮೃತರ ಅಂತ್ಯಸಂಸ್ಕಾರವನ್ನು ಅನಿವಾರ್ಯವಾಗಿ ಉಡುತುರೆ ಹಳ್ಳದ ದಂಡೆಯಲ್ಲೇ ನೆರವೇರಿಸುವ ದುಸ್ಥಿತಿ ನಿರ್ಮಾಣವಾಗಿದೆ.

​ಗ್ರಾಮದಲ್ಲಿ ಕಳೆದ 70 ವರ್ಷಗಳಿಂದ ನೆಲೆಸಿರುವ ಓಬಿಸಿ ಜನಾಂಗದ ಜನರಿಗೆ ಸೂಕ್ತ ಸ್ಮಶಾನ ಜಾಗವಿಲ್ಲದೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅದರಲ್ಲೂ ಮಳೆಗಾಲದ ಸಮಯದಲ್ಲಿ ಹಳ್ಳದಲ್ಲಿ ನೀರು ಹೆಚ್ಚಾಗಿ ಹರಿಯುವುದರಿಂದ ಅಂತಿಮ ಸಂಸ್ಕಾರ ನೆರವೇರಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.

​ರೈತ ಸಂಘಟನೆಯಿಂದ ಮನವಿ ಹಾಗೂ ಉಗ್ರ ಹೋರಾಟದ ಎಚ್ಚರಿಕೆ:

ಈ ಕರಳು ಹಿಂಡುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸ್ಥಳೀಯ ರೈತ ಸಂಘಟನೆಯ ಮುಖಂಡರು ಹಾಗೂ ಗ್ರಾಮಸ್ಥರು ತಾಲೂಕು ಆಡಳಿತ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

​ಪ್ರಮುಖ ಬೇಡಿಕೆಗಳು:

​ಅಂಬಿಕಾಪುರ ಗ್ರಾಮದ ಓಬಿಸಿ ಜನಾಂಗದ ಜನಸಂಖ್ಯೆಗೆ ಅನುಗುಣವಾಗಿ ತಕ್ಷಣವೇ 1 ಎಕರೆ ಸರ್ಕಾರಿ ಜಮೀನನ್ನು ರುದ್ರಭೂಮಿಗಾಗಿ ಕಾಯ್ದಿರಿಸಿ ಮಂಜೂರು ಮಾಡಬೇಕು.

​ಮಂಜೂರಾಗುವ ರುದ್ರಭೂಮಿಗೆ ರಸ್ತೆ ಸಂಪರ್ಕ, ಕುಡಿಯುವ ನೀರು ಹಾಗೂ ತಡೆಗೋಡೆ ನಿರ್ಮಿಸಿಕೊಡಬೇಕು.

​”ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಅಂತಿಮ ಸಂಸ್ಕಾರಕ್ಕೂ ಜಾಗವಿಲ್ಲದೆ ಹಳ್ಳದ ದಂಡೆಗೆ ಕೊಂಡೊಯ್ಯುವ ಪರಿಸ್ಥಿತಿ ಬಂದಿರುವುದು ಶೋಚನೀಯ. ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಜಾಗ ಗುರ್ತಿಸಿ ಕೊಡಬೇಕು, ಇಲ್ಲವಾದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು” ಎಂದು ರೈತ ಸಂಘಟನೆಯ ಮುಖಂಡರು ಎಚ್ಚರಿಸಿದ್ದಾರೆ.

ವರದಿ :- ಶಾರುಕ್ ಖಾನ್ ಹನೂರು


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!