ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಹಾರ್ಟ್ ಸೇಫ್ ತುಮಕೂರು’ ಅಭಿಯಾನಕ್ಕೆ ಚಾಲನೆ – ಆಕ್ಟೋಬರ್ 2ರವರೆಗೆ ಜಾಗೃತಿ ಜಾಥಾ, ತರಬೇತಿ

Share News

ತುಮಕೂರು: ತುಮಕೂರು ಹೊರವಲಯದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತ ಸಿಪಿಆರ್ (CPR) ಕುರಿತು ಜಾಗೃತಿ ಮೂಡಿಸುವ ‘ಹಾರ್ಟ್ ಸೇಫ್ ತುಮಕೂರು’ (Heart Safe Tumakuru) ಅಭಿಯಾನಕ್ಕೆ ಚಾಲನೆ ನೀಡಲಾಯಿತು.

​ಈ ಅಭಿಯಾನವು ಆಕ್ಟೋಬರ್ 2ರವರೆಗೆ ನಡೆಯಲಿದ್ದು, ಸಾರ್ವಜನಿಕವಾಗಿ ಸಿಪಿಆರ್ ತರಬೇತಿ ಹಾಗೂ ಜಾಗೃತಿ ಜಾಥಾಗಳನ್ನು ಆಯೋಜಿಸುವ ಪ್ರಮುಖ ಉದ್ದೇಶವನ್ನು ಹೊಂದಿದೆ.

​ಜೀವ ಉಳಿಸುವ ಸಿಪಿಆರ್ ಅರಿವು:

ಇತ್ತೀಚಿನ ದಿನಗಳಲ್ಲಿ ಸಡನ್ ಹಾರ್ಟ್ ಅಟ್ಯಾಕ್ ಹಾಗೂ ಹೃದಯಾಘಾತದಿಂದ ಮೃತಪಡುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅಂತಹ ತುರ್ತು ಸಂದರ್ಭಗಳಲ್ಲಿ ತಕ್ಷಣವೇ ಪ್ರಥಮ ಚಿಕಿತ್ಸೆಯಾಗಿ ಸಿಪಿಆರ್ ನೀಡುವುದರಿಂದ ಅಮೂಲ್ಯವಾದ ಜೀವವೊಂದನ್ನು ಉಳಿಸಲು ಸಾಧ್ಯವಿದೆ. ಈ ಕುರಿತು ಪ್ರತಿಯೊಬ್ಬ ಸಾರ್ವಜನಿಕರಲ್ಲೂ ಸೂಕ್ತ ಅರಿವು ಮೂಡಿಸುವುದೇ ಈ ಆಂದೋಲನದ ಮುಖ್ಯ ಗುರಿಯಾಗಿದೆ.

​ಈ ಸಂದರ್ಭದಲ್ಲಿ ಕಾರ್ಡಿಯೋಥೊರಾಸಿಕ್ ಶಸ್ತ್ರಚಿಕಿತ್ಸಕರಾದ ಡಾ. ತಮೀಮ್ ಅಹ್ಮದ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಅಶ್ವಿಜಾ, ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಕಾಲೇಜಿನ ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಸಾಣೆಕೊಪ್ಪ ಸೇರಿದಂತೆ ಹಲವು ಗಣ್ಯರು ಹಾಗೂ ವೈದ್ಯರು ಉಪಸ್ಥಿತರಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!