ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಪಿಓಪಿ ಗಣೇಶ, ಡಿಜೆ ಬಳಕೆಗೆ ಕಟ್ಟುನಿಟ್ಟಿನ ನಿಷೇಧ: ಕಾರವಾರ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

Share News

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಶಾಂತಿಯುತ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಡಿಜೆ (DJ) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

​ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.

​ಸಭೆಯ ಪ್ರಮುಖ ಮಾರ್ಗದರ್ಶನಗಳು ಹಾಗೂ ನಿರ್ಧಾರಗಳು:

​ಏಕಗವಾಕ್ಷಿ ವ್ಯವಸ್ಥೆ: ಅನುಮತಿಗಾಗಿ ಅಲೆದಾಟ ತಪ್ಪಿಸಲು ಸ್ಥಳೀಯ ಸಂಸ್ಥೆ ಹಾಗೂ ಪಂಚಾಯಿತಿ ಮಟ್ಟದಲ್ಲಿ ‘ಏಕಗವಾಕ್ಷಿ’ ವ್ಯವಸ್ಥೆ ಮೂಲಕ ಎನ್‌ಒಸಿ (NOC) ನೀಡಲಾಗುವುದು.

​ಶಬ್ದಮಿತಿ ಮತ್ತು ನಿಯಮ: ರಾತ್ರಿ ೧೦ ಗಂಟೆಯ ನಂತರ ಧ್ವನಿವರ್ಧಕ ನಿಷೇಧಿಸಲಾಗಿದೆ. ವಸತಿ ಪ್ರದೇಶಗಳಲ್ಲಿ ಗರಿಷ್ಠ ೫೫ ಡೆಸಿಬಲ್ ಹಾಗೂ ಸೂಕ್ಷ್ಮ ವಲಯಗಳಲ್ಲಿ ೫೦ ಡೆಸಿಬಲ್ ಶಬ್ದಮಿತಿ ಕಡ್ಡಾಯ.

​ಸುರಕ್ಷತೆ ಹಾಗೂ ಸೌಲಭ್ಯ: ವಿಸರ್ಜನಾ ಸ್ಥಳಗಳಲ್ಲಿ ಅಗ್ನಿಶಾಮಕ ದಳ, ಹೆಸ್ಕಾಂ ಸಿಬ್ಬಂದಿ, ಜೆಸಿಬಿ ಹಾಗೂ ಈಜುಗಾರರನ್ನು ನಿಯೋಜಿಸಲಾಗುವುದು. ಪರಿಸರ ಸ್ನೇಹಿ ‘ಹಸಿರು ಪಟಾಕಿ’ ಮಾರಾಟಕ್ಕೆ ಜಿಲ್ಲೆಯ ೫೦ಕ್ಕೂ ಹೆಚ್ಚು ಸ್ಥಳಗಳಲ್ಲಿ ಮಳಿಗೆ ವ್ಯವಸ್ಥೆ ಮಾಡಲಾಗಿದೆ.

​೧,೪೯೨ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ:

ಜಿಲ್ಲೆಯಾದ್ಯಂತ ಒಟ್ಟು ೧,೪೯೨ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, ಭಟ್ಕಳ (೩೯೨), ಕಾರವಾರ-ಅಂಕೋಲಾ (೧೩೧), ಶಿರಸಿ (೬೬೮) ಹಾಗೂ ದಾಂಡೇಲಿ-ಹಳಿಯಾಳ-ಜೋಯಿಡಾ (೩೦೧) ವ್ಯಾಪ್ತಿಯಲ್ಲಿ ಪ್ರತಿಷ್ಠಾಪನೆಯಾಗಲಿವೆ ಎಂದು ಎಸ್ಪಿ ದೀಪನ್ ಎಂ.ಎನ್. ಮಾಹಿತಿ ನೀಡಿದ್ದಾರೆ.

​ಬಿಗಿ ಪೊಲೀಸ್ ಭದ್ರತೆ ಹಾಗೂ ತನಿಖೆ:

ಹಳೆಯ ಗಲಭೆಕೋರರ ವಿರುದ್ಧ ಬಿಎನ್‌ಎಸ್ (BNS) ಕಾಯ್ದೆಯಡಿ ಪ್ರಿವೆಂಟಿವ್ ಆಕ್ಷನ್ ರಿಪೋರ್ಟ್ ದಾಖಲಿಸಿ ಬಾಂಡ್ ಓವರ್ ಮಾಡಲಾಗಿದೆ. ಭದ್ರತೆಗಾಗಿ ೪೦೦ ಗೃಹರಕ್ಷಕರು, ೧೫ ಡಿಎಆರ್ ಹಾಗೂ ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಲು ಕ್ವಿಕ್ ರೆಸ್ಪಾನ್ಸ್ ಟೀಮ್ (QRT) ಕಾರ್ಯಾಚರಿಸಲಿದೆ. ಡಿಜೆ ಬದಲಿಗೆ ಸ್ಥಳೀಯ ಕಲಾತಂಡಗಳಿಗೆ ಪ್ರೋತ್ಸಾಹ ನೀಡಲು ಮನವಿ ಮಾಡಲಾಗಿದೆ.

​ಸಭೆಯಲ್ಲಿ ಕಾರವಾರ ಎಸಿ ರಮ್ಯಾ ಆರ್., ಹೆಚ್ಚುವರಿ ಎಎಸ್ಪಿ ಕೃಷ್ಣಮೂರ್ತಿ, ಭಟ್ಕಳ ಎಎಸ್‌ಪಿ ರಾನು ಗುಪ್ತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!