ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್
ಫರಹತಾಬಾದ್ ಪೊಲೀಸ್ ಠಾಣೆಗೆ ಕಮಿಷನರ್ ಡಾ. ಶರಣಪ್ಪ ಎಸ್.ಡಿ. ಭೇಟಿ: ಕಡತಗಳ ಪರಿಶೀಲನೆ, ವಸತಿ ಗೃಹಗಳ ಕುಂದುಕೊರತೆ ಆಲಿಕೆ

ಕಲಬುರಗಿ: ನಗರ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರು ಫರಹತಾಬಾದ್ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಠಾಣೆಯ ಆವರಣ ಹಾಗೂ ಸಿಬ್ಬಂದಿಯ ಕರ್ತವ್ಯ ದಿನಚರಿಯನ್ನು ಪರಿಶೀಲಿಸಿದ ಆಯುಕ್ತರು, ಠಾಣೆಯಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳ ಕಡತಗಳನ್ನು (Files) ಕೂಲಂಕಷವಾಗಿ ಪರಿಶೀಲಿಸಿ ಶೀಘ್ರ ವಿಲೇವಾರಿಗೆ ಅಗತ್ಯ ನಿರ್ದೇಶನ ನೀಡಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚಿಸಿದರು.
ಪೊಲೀಸ್ ವಸತಿ ಗೃಹಗಳಿಗೆ ಭೇಟಿ:
ಇದೇ ವೇಳೆ ಪೊಲೀಸ್ ವಸತಿ ಗೃಹಗಳಿಗೆ ಭೇಟಿ ನೀಡಿದ ಆಯುಕ್ತರು, ಸಿಬ್ಬಂದಿಯ ಕುಟುಂಬಸ್ಥರು ಹಾಗೂ ಪೋಷಕರೊಂದಿಗೆ ನೇರವಾಗಿ ಸಂವಾದ ನಡೆಸಿದರು. ವಸತಿ ಸಮುಚ್ಚಯದಲ್ಲಿರುವ ಕುಂದುಕೊರತೆ ಹಾಗೂ ಸಮಸ್ಯೆಗಳನ್ನು ಆಲಿಸಿದ ಅವರು, ಅವುಗಳನ್ನು ಶೀಘ್ರದಲ್ಲೇ ಪರಿಹರಿಸುವುದಾಗಿ ಭರವಸೆ ನೀಡಿದರು.



