ಸರ್ಕಾರಿ ನಿಲಯದಲ್ಲಿ ವಿದ್ಯಾರ್ಥಿನಿಯರ ಬಟ್ಟೆ ಕಳವು ಮಾಡುತ್ತಿದ್ದ ಆರೋಪಿ ಬಂಧನ

ಬೆಳ್ಳಾರೆ: ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅಕ್ರಮವಾಗಿ ಅತಿಕ್ರಮ ಪ್ರವೇಶಿಸಿ, ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಬಂಧಿತ ಆರೋಪಿ.
ಸಿಸಿಟಿವಿಯಲ್ಲಿ ಚಲನವಲನ ಸೆರೆ:
ಸೆಪ್ಟೆಂಬರ್ 2ರಂದು ವಿದ್ಯಾರ್ಥಿನಿಲಯದಲ್ಲಿ ಒಣಗ ಹಾಕಿದ್ದ ಬಟ್ಟೆಗಳು ದಿಢೀರ್ ಕಾಣೆಯಾಗಿದ್ದವು. ಇದರಿಂದ ಅನುಮಾನಗೊಂಡು ವಸತಿ ನಿಲಯದ ಸಿಸಿಟಿವಿ (CCTV) ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮವಾಗಿ ನಿಲಯದ ಆವರಣ ಹೊಕ್ಕು ಬಟ್ಟೆಗಳನ್ನು ಕದಿಯುತ್ತಿರುವುದು ಪತ್ತೆಯಾಗಿತ್ತು.
ನ್ಯಾಯಾಂಗ ಬಂಧನ:
ಈ ಕುರಿತು ಸೆಪ್ಟೆಂಬರ್ 5ರಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ತೀವ್ರಗೊಳಿಸಿದ ಪೊಲೀಸರು ಸೆಪ್ಟೆಂಬರ್ 7ರಂದು ಆರೋಪಿ ರಾಮಚಂದ್ರನನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.



