ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಜಿಲ್ಲಾಸ್ಪತ್ರೆ ವೈದ್ಯನ ಲಂಚಾವತಾರ ಆರೋಪ: ಹಣ ಕೊಡದಿದ್ದರೆ ಶಸ್ತ್ರಚಿಕಿತ್ಸೆ ಇಲ್ಲ!

Share News

ರಾಮನಗರ: ಬಡವರು ಹಾಗೂ ಸಾಮಾನ್ಯ ಜನರಿಗೆ ಉಚಿತ ಹಾಗೂ ಕೈಗೆಟುಕುವ ಆರೋಗ್ಯ ಸೇವೆ ಒದಗಿಸಬೇಕಾದ ರಾಮನಗರ ಜಿಲ್ಲಾಸ್ಪತ್ರೆಯಲ್ಲೇ ಲಂಚದ ಆರೋಪ ಕೇಳಿಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

​ಜಿಲ್ಲಾಸ್ಪತ್ರೆಯ ಯುರಾಲಜಿ ವಿಭಾಗದ ವೈದ್ಯ ಡಾ. ವಿಶ್ವನಾಥ್ ಆರ್. ಅವರು ಕಿಡ್ನಿ ಸ್ಟೋನ್ ಶಸ್ತ್ರಚಿಕಿತ್ಸೆಗೆ ಬರುವ ರೋಗಿಗಳಿಂದ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಶಸ್ತ್ರಚಿಕಿತ್ಸೆಗೆ ತಲಾ ₹30 ಸಾವಿರ ನೀಡಬೇಕು ಇಲ್ಲವಾದರೆ ಆಪರೇಷನ್ ಮಾಡುವುದಿಲ್ಲ ಎಂದು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದ್ದು, ವೈದ್ಯಕೀಯ ಕ್ಷೇತ್ರದ ಘನತೆಗೆ ಧಕ್ಕೆ ತರುವಂತಹ ಆರೋಪಗಳು ಇದೀಗ ಚರ್ಚೆಗೆ ಗ್ರಾಸವಾಗಿವೆ.

​₹30 ಸಾವಿರಕ್ಕೆ ಬೇಡಿಕೆ?

ಕಳೆದ ಮೂರು ವರ್ಷಗಳಿಂದ ಜಿಲ್ಲಾಸ್ಪತ್ರೆಯಲ್ಲಿ ಏಕೈಕ ಯುರಾಲಜಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ವಿಶ್ವನಾಥ್ ವಿರುದ್ಧ ಈ ಹಿಂದೆ ಕೂಡ ಲಂಚದ ಆರೋಪಗಳು ಕೇಳಿಬಂದಿದ್ದವು ಎನ್ನಲಾಗಿದೆ. “ಆಸ್ಪತ್ರೆಯಲ್ಲಿ ಅಗತ್ಯ ಶಸ್ತ್ರಚಿಕಿತ್ಸಾ ಪರಿಕರಗಳಿಲ್ಲ, ಅವುಗಳನ್ನು ಹೊರಗಿನಿಂದ ತರಿಸಬೇಕು” ಎಂದು ಹೇಳಿ ರೋಗಿಗಳಿಂದ ಹಣ ಪಡೆಯಲಾಗುತ್ತಿದೆ ಎಂಬ ಆರೋಪವೂ ಇದೆ. ಈ ಕುರಿತು ಲೋಕಾಯುಕ್ತ ಎಸ್ಪಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ, ಆರೋಪಿತ ವೈದ್ಯರು ತಮ್ಮ ವರ್ತನೆಯನ್ನು ಮುಂದುವರಿಸಿದ್ದಾರೆ ಎಂದು ದೂರಲಾಗಿದೆ.

​ರಕ್ತಸ್ರಾವವಾಗಿದ್ದರೂ ಚಿಕಿತ್ಸೆ ನೀಡಲಿಲ್ಲ?

ಕುರುಬರಹಳ್ಳಿ ಗ್ರಾಮದ ರಂಗೇಗೌಡ ಎಂಬವರು ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅವರಿಂದಲೂ ₹30 ಸಾವಿರಕ್ಕೆ ಬೇಡಿಕೆ ಇಡಲಾಗಿತ್ತು ಎನ್ನಲಾಗಿದೆ. ಶಸ್ತ್ರಚಿಕಿತ್ಸೆಯ ವೇಳೆ ಸುಮಾರು ₹7 ಸಾವಿರ ಮೌಲ್ಯದ ಔಷಧಗಳನ್ನು ಹೊರಗಿನಿಂದ ತರಿಸಿಕೊಳ್ಳಲಾಗಿತ್ತು. ಆದರೆ ಕೇಳಿದಷ್ಟು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಶಸ್ತ್ರಚಿಕಿತ್ಸೆಯ ಬಳಿಕ ಹೊಟ್ಟೆಯಿಂದ ರಕ್ತಸ್ರಾವವಾಗುತ್ತಿದ್ದರೂ ಸೂಕ್ತ ಚಿಕಿತ್ಸೆ ಅಥವಾ ಕನಿಷ್ಠ ಬ್ಯಾಂಡೇಜ್ ಕೂಡ ಮಾಡದೆ ನಿರ್ಲಕ್ಷ್ಯ ತೋರಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

​ಬಡ ರೋಗಿಗಳ ಜೀವದ ಜೊತೆ ಆಟವಾಡುತ್ತಿರುವ ವೈದ್ಯನ ವಿರುದ್ಧ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ತಕ್ಷಣವೇ ಕಟ್ಟುನಿಟ್ಟಿನ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!