ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಅರಣ್ಯ ಪ್ರದೇಶದಲ್ಲಿ ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!

Share News

ಹನೂರು : ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗರಿಕೆ ಖಂಡಿ ಗುಡ್ಡೆಯೂರು ಹಳ್ಳದ ಬಳಿಯ ಅರಣ್ಯ ಪ್ರದೇಶದಲ್ಲಿ 55 ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯೋರ್ವ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

​ಘಟನೆಯ ವಿವರ:

ಅರಣ್ಯ ಪ್ರದೇಶದಲ್ಲಿ ಮೃತದೇಹ ಬಿದ್ದಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ರಾಮಾಪುರ ಇನ್ಸ್ಪೆಕ್ಟರ್ ಚಿಕ್ಕರಾಜ ಶೆಟ್ಟಿ, ಸಹಾಯಕ ಸಬ್ ಇನ್ಸ್ಪೆಕ್ಟರ್ ಗುರುಸ್ವಾಮಿ ಹಾಗೂ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

​ಸ್ಥಳದಲ್ಲಿ ವಿಷದ ಬಾಟಲಿ: ಘಟನಾ ಸ್ಥಳದಲ್ಲಿ ವಿಷದ ಬಾಟಲಿ ಪತ್ತೆಯಾಗಿದ್ದು, ಸುಮಾರು 50 ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯ ಶವ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

​ಶವಪರೀಕ್ಷೆ ಮತ್ತು ಕ್ರಮ: ಶವವನ್ನು ಹನೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

​ಪ್ರಕರಣ ದಾಖಲಿಸಿಕೊಂಡಿರುವ ರಾಮಪುರ ಠಾಣೆ ಪೊಲೀಸರು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮೃತರ ಗುರುತು ಪತ್ತೆ ಹಚ್ಚಲು ಹಾಗೂ ಮುಂದಿನ ಕಾನೂನು ಕ್ರಮಕ್ಕಾಗಿ ತನಿಖೆ ಮುಂದುವರಿಸಿದ್ದಾರೆ.

ವರದಿ: ಶಾರುಕ್ ಖಾನ್


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!