ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಮಾಧಾಪುರ ರಸ್ತೆಯ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆ ಗಳಿಸಿದ ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು

Share News

ಸುಂಟಿಕೊಪ್ಪ (ಕೊಡಗು): ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಹೋಬಳಿ ಘಟಕದ ಉದ್ಘಾಟನೆ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ಇತ್ತೀಚೆಗೆ ಅತ್ಯಂತ ಯಶಸ್ವಿಯಾಗಿ ನೆರವೇರಿತು.

​ಕುಶಾಲನಗರ ತಾಲೂಕು ಅಧ್ಯಕ್ಷ ಶಿವು ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಹಲವು ಯುವಕರು ಸಂಘಟನೆಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಕರವೇ ಸ್ವಾಭಿಮಾನಿ ಸೇನೆಯ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್ ಗೌಡ ವಿ. ಎಸ್., ರಾಜ್ಯೋತ್ಸವ ಕಾರ್ಯಕ್ರಮದ ಖಜಾಂಜಿ ಅಂತೋನಿ, ಹಿರಿಯ ಸದಸ್ಯರಾದ ಕೆ. ಆರ್. ನಂಜಪ್ಪ, ವಿಲ್ಸನ್ ಹಾಗೂ ಸುಂಟಿಕೊಪ್ಪ ಹೋಬಳಿ ಯುವ ಘಟಕದ ಅಧ್ಯಕ್ಷ ಕ್ಲಿಫರ್ಡ್ ರೊಡ್ರಿಗಸ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರುಗಿತು.

​ನೂತನ ಪದಾಧಿಕಾರಿಗಳ ಆಯ್ಕೆ:

ಸುಂಟಿಕೊಪ್ಪ ಹೋಬಳಿ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

​ಅಧ್ಯಕ್ಷರು: ಶರೀಫ್ ಎಂ. ಇ.

​ಉಪಾಧ್ಯಕ್ಷರು: ಶಹಾದ್ ವಿ. ಎ.

​ಇದೇ ವೇಳೆ ನಿತಿನ್ ಮಂದಣ್ಣ, ನಿತಿನ್ ಎನ್. ಎಸ್., ನವೀನ್, ಸಂಜಯ್ ಹೋಬಳಿ, ರೋಷನ್, ಸಾಧಿಕ್, ಸಮೀರ್, ಸಿದ್ದೀಕ್, ನಾಸೀರ್, ಕರ್ಣ, ರಾಜೇಶ್ ಹಾಗೂ ಹುಸೇನ್ ಸೇರಿದಂತೆ ಹಲವು ಯುವಕರು ಸಂಘಟನೆಗೆ ಅಧಿಕೃತವಾಗಿ ಸೇರ್ಪಡೆಯಾದರು.

​ಸಮಾಜಮುಖಿ ಕೆಲಸಕ್ಕೆ ಕರೆ:

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್ ಗೌಡ, ಯುವಕರು ಸಂಘಟನೆಯ ಮೂಲಕ ಸಮಾಜದಲ್ಲಿ ಉತ್ತಮ ಕೆಲಸಗಳನ್ನು ಮಾಡಿ ಒಳ್ಳೆಯ ಹೆಸರು ಗಳಿಸಬೇಕೆಂದು ಕರೆ ನೀಡಿದರು. ತಾಲೂಕು ಅಧ್ಯಕ್ಷ ಶಿವು ಮಾತನಾಡಿ, “ಅನ್ಯಾಯದ ವಿರುದ್ಧ ಹೋರಾಡುವುದರ ಜೊತೆಗೆ ಸಾರ್ವಜನಿಕರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡೋಣ” ಎಂದು ಹೇಳಿದರು.

​ಮೊದಲ ದಿನವೇ ಶ್ರಮದಾನ — ರಸ್ತೆ ಗುಂಡಿ ಮುಚ್ಚಿದ ಕಾರ್ಯಕರ್ತರು:

ಸಂಘಟನೆಯ ಉದ್ಘಾಟನೆ ಮುಗಿಯುತ್ತಿದ್ದಂತೆಯೇ ನೂತನ ಪದಾಧಿಕಾರಿಗಳು ಹಾಗೂ ಸದಸ್ಯರು ತಕ್ಷಣವೇ ಸಮಾಜಮುಖಿ ಕಾರ್ಯಕ್ಕೆ ಮುಂದಾದರು. ಸುಂಟಿಕೊಪ್ಪದಿಂದ ಮಾದಾಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿದ್ದ ಅಪಾಯಕಾರಿ ಬೃಹತ್ ರಸ್ತೆ ಗುಂಡಿಗಳನ್ನು ಕಾರ್ಯಕರ್ತರು ಸ್ವತಃ ಶ್ರಮದಾನದ ಮೂಲಕ ಮುಚ್ಚಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

​ಸಂಘಟನೆಗೆ ಸೇರಿದ ಮೊದಲ ದಿನವೇ ಇಂತಹ ಜನಪರ ಕೆಲಸಕ್ಕೆ ಕೈಹಾಕಿದ ಕರವೇ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರ ನಡೆಯನ್ನು ಸಾರ್ವಜನಿಕರು ಹಾಗೂ ವಾಹನ ಸವಾರರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!