ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಸೋಮವಾರಪೇಟೆ: ಎಸ್‌ಬಿಐ ಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದ ಇಬ್ಬರು ಖತರ್ನಾಕ್ ಆರೋಪಿಗಳು ಬಂಧನ

Share News

ಸೋಮವಾರಪೇಟೆ (ಕೊಡಗು): ಪಟ್ಟಣದ ಗಾಂಧಿ ಸರ್ಕಲ್ ಬಳಿ ಇರುವ ಎಸ್‌ಬಿಐ (SBI) ಬ್ಯಾಂಕಿನ ಎಟಿಎಂ ಯಂತ್ರವನ್ನು ಒಡೆದು ಕಳ್ಳತನ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

​ಸೆಪ್ಟೆಂಬರ್ 4 ರಂದು ನಡೆದಿತ್ತು ಎನ್ನಲಾದ ಈ ಕಳ್ಳತನ ಯತ್ನದ ಕುರಿತು ಬ್ಯಾಂಕ್ ಮ್ಯಾನೇಜ‌ರ್ ಸುಮೇಶ್ ಅವರು ನೀಡಿದ ದೂರಿನನ್ವಯ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಮೊ.ಸಂ 219/2026, ಕಲಂ: 303(2), 62 ಬಿ.ಎನ್.ಎಸ್) ದಾಖಲಾಗಿತ್ತು.

​ಕಾರ್ಯಾಚರಣೆ ಹಾಗೂ ಜಪ್ತಿ:

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆ ಕೈಗೊಂಡ ಪೊಲೀಸರು, ಸೆಪ್ಟೆಂಬರ್ 11 ರಂದು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಕೃತ್ಯಕ್ಕೆ ಆರೋಪಿಗಳು ಬಳಸಿದ್ದ ಕಾರನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

​ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಸೋಮವಾರಪೇಟೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!