ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

‘ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ’: ಬಡವರ ನಿವೇಶನ ಹಂಚಿಕೆ ಪ್ರಕ್ರಿಯೆಗೆ ಚಾಲನೆ ನೀಡಿದ ಉಪಮುಖ್ಯಮಂತ್ರಿ!

Share News

ಕಾಂಗ್ರೆಸ್ ಸರ್ಕಾರವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಮತ್ತೊಂದು ಪ್ರಮುಖ ಭರವಸೆಯನ್ನು ಈಡೇರಿಸಲು ಮುಂದಾಗಿದೆ. ರಾಜ್ಯದ ಎಲ್ಲಾ ವಸತಿ ರಹಿತರಿಗೆ ಸ್ವಂತ ಸೂರಿನ ಭಾಗ್ಯ ಕಲ್ಪಿಸುವ ನಿಟ್ಟಿನಲ್ಲಿ, ರಾಜ್ಯದ ಪ್ರತಿ ಜಿಲ್ಲೆಯಲ್ಲೂ ತಲಾ ೫೦ ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಗಾಗಿ ಲಭ್ಯವಿರುವ ಮತ್ತು ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ತಕ್ಷಣವೇ ಗುರುತಿಸುವಂತೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ರವರು ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

​ನಿವೇಶನಗಳ ಅಳತೆ ಮತ್ತು ಯೋಜನೆ ವಿವರ

ರಾಜ್ಯದ ಎಲ್ಲಾ ೩೧ ಜಿಲ್ಲೆಗಳಲ್ಲೂ ಈ ಬೃಹತ್ ನಿವೇಶನ ಹಂಚಿಕೆ ಅಭಿಯಾನ ನಡೆಯಲಿದ್ದು, ಅರ್ಹ ಬಡ ಫಲಾನುಭವಿಗಳಿಗೆ ನಿವೇಶನಗಳನ್ನು ಸಿದ್ಧಪಡಿಸಲಾಗುತ್ತಿದೆ. ಯೋಜನೆಯ ಪ್ರಕಾರ:

​ಗ್ರಾಮೀಣ ಪ್ರದೇಶಗಳಲ್ಲಿ: ೩೦x೪೦ ಅಡಿ ಅಳತೆಯ ನಿವೇಶನಗಳು.

​ನಗರ ಪ್ರದೇಶಗಳಲ್ಲಿ: ೨೦x೩೦ ಅಡಿ ಅಳತೆಯ ನಿವೇಶನಗಳನ್ನು ಗುರುತಿಸಿ ಹಂಚಿಕೆ ಮಾಡಲಾಗುತ್ತದೆ.

​ಪಾರದರ್ಶಕ ಮತ್ತು ತುರ್ತು ಪ್ರಕ್ರಿಯೆಗೆ ನಿರ್ದೇಶನ

ಯಾವುದೇ ವಿಳಂಬಕ್ಕೆ ಆಸ್ಪದ ನೀಡದೆ ಖಾಲಿ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನಗಳ ರಚನೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

​”ನಾವು ಕೊಟ್ಟ ಮಾತಿಗೆ ಬದ್ಧರಾಗಿ ಪ್ರಣಾಳಿಕೆಯ ಭರವಸೆಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದೇವೆ. ಪ್ರತಿಯೊಬ್ಬರಿಗೂ ಸ್ವಂತ ಮನೆಯ ಕನಸನ್ನು ಸಾಕಾರಗೊಳಿಸಿ ನೆಮ್ಮದಿಯ ಜೀವನ ಕಲ್ಪಿಸುವುದೇ ನಮ್ಮ ಸರ್ಕಾರದ ಮುಖ್ಯ ಆಶಯವಾಗಿದೆ” ಎಂದು ಡಿಸಿಎಂ ತಿಳಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!