ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸ್ಥಳೀಯ ಸುದ್ದಿಗಳು

ಅಂತರರಾಜ್ಯ ಬೈಕ್ ಕಳ್ಳರ ಬಂಧನ – ₹2 ಲಕ್ಷ ಮೌಲ್ಯದ 5 ಬೈಕ್‌ಗಳು ವಶ

Share News

ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಪೊಲೀಸರು, ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು ಬಂಧಿಸಿ, ಅವರಿಂದ ಸುಮಾರು ₹2 ಲಕ್ಷ ಮೌಲ್ಯದ 5 ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಜುಲೈ 22, 2026ರಂದು ಸದಲಗಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣದ ಬೆನ್ನತ್ತಿದ ಪೊಲೀಸರು, ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿಭಾಗದಲ್ಲಿ ಸಕ್ರಿಯರಾಗಿದ್ದ ಶುಭಂ ರಾಜು ಮನ್ನೋಳೆ ಹಾಗೂ ಆಕಾಶ ಪ್ರಕಾಶ ವಡೇರ್ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ವಿವಿಧೆಡೆ ಕಳವು ಮಾಡಿದ್ದ ₹2 ಲಕ್ಷ ಮೌಲ್ಯದ 5 ಮೋಟಾರ್ ಸೈಕಲ್‌ಗಳನ್ನು ಜಪ್ತಿ ಮಾಡಲಾಗಿದೆ.

ಚಿಕ್ಕೋಡಿ ಉಪವಿಭಾಗದ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ, ಸದಲಗಾ ಪೊಲೀಸ್ ಠಾಣೆಯ ಪಿಎಸ್‌ಐ ಶಿವಕುಮಾರ ಬಿರಾದಾರ್ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.

​ಪ್ರಕರಣವನ್ನು ಕ್ಷಿಪ್ರವಾಗಿ ಭೇದಿಸಿ, ಕಳವು ಮಾಲು ಸಮೇತ ಆರೋಪಿಗಳನ್ನು ಬಂಧಿಸಿದ ಸದಲಗಾ ಠಾಣೆಯ ಪೊಲೀಸ್ ತಂಡದ ಕಾರ್ಯವೈಖರಿಯನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕೆ. ರಾಮರಾಜನ್, ಐಪಿಎಸ್ ಅವರು ಪ್ರಶಂಸಿಸಿ ಅಭಿನಂದಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!