Crime Newsಕ್ರೈಂ ಸುದ್ದಿಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುರಾಜ್ಯ ಸುದ್ದಿ

ಆರಿಫ್ ಕೊಲೆ ಪ್ರಕರಣ; ಆರು ಆರೋಪಿಗಳ ಗುರುತು ಪತ್ತೆ!

Share News

ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನ ಗುರುತಿಸಲಾಗಿದ್ದು, ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ, ತನಿಖಾ ತಂಡಗಳಿಗೆ ಅವರನ್ನು ತಕ್ಷಣವೇ ಬಂಧಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

“ತನಿಖೆಯ ಸಮಯದಲ್ಲಿ ನಮ್ಮ ತಂಡಗಳು ಸಂಪೂರ್ಣ ಸಂಚು ಮತ್ತು ಘಟನೆಗಳ ಸರಣಿಯನ್ನು ಮರುನಿರ್ಮಾಣ ಮಾಡಿದ್ದು, ಈ ವೇಳೆ ಪ್ರಕರಣದಲ್ಲಿ ಇನ್ನೂ ಕೆಲವು ವ್ಯಕ್ತಿಗಳು ಭಾಗಿಯಾಗಿರುವುದನ್ನು ಪತ್ತೆಹಚ್ಚಿವೆ. ಅಪರಾಧ ಎಸಗಲು ಅಥವಾ ಆರೋಪಿಗಳು ತಪ್ಪಿಸಿಕೊಳ್ಳಲು ಮತ್ತು ಅಡಗಿಕೊಳ್ಳಲು ಸಹಾಯ ಮಾಡಿದ ಶಂಕೆಯಿರುವ ವ್ಯಕ್ತಿಗಳನ್ನು ಪ್ರಸ್ತುತ ವಿಚಾರಣೆ ನಡೆಸಲಾಗುತ್ತಿದೆ. ಅವರ ಪಾತ್ರ ದೃಢಪಟ್ಟಲ್ಲಿ, ಅವರನ್ನೂ ಸಹ ಬಂಧಿಸಲಾಗುವುದು” ಎಂದು ತಿಳಿಸಿದರು.”

ಆರೋಪಿಗಳಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವವರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 249(a) ಅಡಿಯಲ್ಲಿ ಶಿಕ್ಷೆಗೆ ಅರ್ಹರಾಗಿರುತ್ತಾರೆ. ಈ ಹಿಂದಿನಂತೆಯೇ, ಈ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಪೊಲೀಸ್ ವಾರ್ತೆ

ವರದಿ ಜಯರಾಜ್ ಅಮೀನ್ ಉಪ್ಪಿನಂಗಡಿ


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!