ಟ್ರೆಂಡಿಂಗ್ ಸುದ್ದಿಗಳುಕ್ರೈಂ ಸುದ್ದಿಜಿಲ್ಲಾ ಸುದ್ದಿತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಕುಡಿದು ಬಂದು ಪೋಷಕರೊಂದಿಗೆ ಜಗಳ: 112 ಪೊಲೀಸರ ತಕ್ಷಣದ ಮಧ್ಯಪ್ರವೇಶದಿಂದ ತಪ್ಪಿದ ಅನಾಹುತ

Share News

ಆಳಂದ: ತಾಲೂಕಿನ ಹಾಳ ತಡಕಲ್ ಗ್ರಾಮದಲ್ಲಿ ಮದ್ಯಪಾನ ಮಾಡಿ ಹೆತ್ತ ಪೋಷಕರೊಂದಿಗೇ ವಿನಾಕಾರಣ ಜಗಳ ತೆಗೆದು ಗಲಾಟೆ ಮಾಡುತ್ತಿದ್ದ ವ್ಯಕ್ತಿಯನ್ನು 112 ತುರ್ತು ಪೊಲೀಸ್ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ನಿಯಂತ್ರಿಸಿದ ಘಟನೆ ಸೋಮವಾರ ನಡೆದಿದೆ.

​ಜುಲೈ 14ರಂದು ಹಾಳ ತಡಕಲ್ ಗ್ರಾಮದ ನಿವಾಸಿಯೊಬ್ಬರು 112 ಸಹಾಯವಾಣಿಗೆ ಕರೆ ಮಾಡಿ, “ತಮ್ಮ ಅಣ್ಣ ಮದ್ಯಪಾನ ಮಾಡಿ ಮನೆಗೆ ಬಂದು ತಂದೆ-ತಾಯಿಯೊಂದಿಗೆ ಗಲಾಟೆ ಮಾಡುತ್ತಿದ್ದಾನೆ” ಎಂದು ತುರ್ತು ಮಾಹಿತಿ (E.ID-2878869) ನೀಡಿದ್ದರು.

​ಮಾಹಿತಿ ಲಭ್ಯವಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ 112 ಪೊಲೀಸ್ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಜಗಳ ಮಾಡುತ್ತಿದ್ದ ವ್ಯಕ್ತಿಗೆ ಕಾನೂನಿನ ತಿಳಿವಳಿಕೆ ನೀಡಿ, ಕುಟುಂಬದ ಸದಸ್ಯರೊಂದಿಗೆ ಶಾಂತಿಯುತವಾಗಿ ವರ್ತಿಸುವಂತೆ ಕಡಕ್ ಎಚ್ಚರಿಕೆ ನೀಡಿದರು.

ಬಳಿಕ ಈ ಘಟನೆ ಕುರಿತು ಮುಂದಿನ ಕ್ರಮಕ್ಕಾಗಿ ಆಳಂದ ಪೊಲೀಸ್ ಠಾಣೆಯ ಠಾಣಾಧಿಕಾರಿಗಳಿಗೆ (SHO) ಮಾಹಿತಿ ನೀಡಲಾಯಿತು. ಪೊಲೀಸರ ಸಮಯೋಚಿತ ಮಧ್ಯಪ್ರವೇಶದಿಂದ ಯಾವುದೇ ಅಹಿತಕರ ಘಟನೆ ಸಂಭವಿಸದೆ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದು, ತದನಂತರ ಪ್ರಕರಣವನ್ನು ಮುಕ್ತಾಯಗೊಳಿಸಲಾಯಿತು.

​ಯಾವುದೇ ರೀತಿಯ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ತಕ್ಷಣವೇ 112 ಸಹಾಯವಾಣಿಯನ್ನು ಬಳಸಿಕೊಳ್ಳಬೇಕು ಎಂದು ಈ ಮೂಲಕ ಪೊಲೀಸರು ಮನವಿ ಮಾಡಿದ್ದಾರೆ.

 


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!