Crime Newsಕ್ರೈಂ ಸುದ್ದಿಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುರಾಜ್ಯ ಸುದ್ದಿ

ಬೆಳಗಾವಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆ ಆತ್ಮಹತ್ಯೆ; ಪತಿ ಪೊಲೀಸ್ ವಶಕ್ಕೆ

Share News

ಬೆಳಗಾವಿ: ನಗರದ ಜ್ಯೋತಿ ನಗರದಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳ ತಾಯಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

​ಘಟನೆಯ ವಿವರ:

ಶ್ರೀನಿಧಿ ಸಂತೋಷ ನಾವಿ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2021ರಲ್ಲಿ ಶ್ರೀನಿಧಿ ಅವರ ವಿವಾಹ ಸಂತೋಷ ಎಂಬುವವರೊಂದಿಗೆ ನಡೆದಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ಸಮಯದಿಂದ ದಂಪತಿ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.

ಮೃತಳ ಪತಿ ಸಂತೋಷ್, ಶ್ರೀನಿಧಿ ಅವರು ತಮ್ಮ ತವರು ಮನೆಯವರೊಂದಿಗೆ ಮಾತನಾಡಬಾರದೆಂಬ ಕಾರಣಕ್ಕೆ ಅವರ ಮೊಬೈಲ್ ಫೋನ್ ಕಿತ್ತುಕೊಂಡು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಪತಿ, ಅತ್ತೆ ಹಾಗೂ ಇನ್ನಿಬ್ಬರು ಸಂಬಂಧಿಕರು ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಶ್ರೀನಿಧಿ ಅವರು ಮನೆಯ ಮೊದಲ ಮಹಡಿಯ ಕಿಟಕಿಯ ಗ್ರೀಲ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮೃತಳ ಪೋಷಕರು ನೀಡಿದ ದೂರಿನ ಮೇರೆಗೆ ಪತಿ, ಅತ್ತೆ ಸೇರಿದಂತೆ ನಾಲ್ವರ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಆರೋಪಿ ಪತಿಯನ್ನು ಬಂಧಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

 


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!