ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿ

ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪ – ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಯುವತಿ

Share News

ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಪ್ರೀತಿಸಿ, ಬಳಿಕ ಮದುವೆಗೆ ನಿರಾಕರಿಸಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ಪ್ರಿಯಕರನ ಮನೆ ಮುಂದೆ ಧರಣಿ ಕುಳಿತಿರುವ ಘಟನೆ ಬೆಳಗಾವಿ ಜಿಲ್ಲೆಯ ಉಪ್ಪರವಾಡಿ ಗ್ರಾಮದಲ್ಲಿ ನಡೆದಿದೆ.

​ಉಪ್ಪರವಾಡಿ ಗ್ರಾಮದ ನಿವಾಸಿ ಅಕ್ಷಯ ಉಪ್ಪಾರ ಎಂಬಾತನೇ ಮೋಸ ಮಾಡಿದ ಆರೋಪಿ ಎಂದು ಯುವತಿ ಆರೋಪಿಸಿದ್ದಾಳೆ.

​ಘಟನೆಯ ವಿವರ:

ಅಕ್ಷಯ ಉಪ್ಪಾರ ಕಳೆದ 5 ವರ್ಷಗಳಿಂದ ತನ್ನನ್ನು ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ಭರವಸೆ ನೀಡಿದ್ದ. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಆತ್ಮೀಯ ಸಂಬಂಧ ಬೆಳೆದಿತ್ತು. ಮದುವೆ ಆಗುವುದಾಗಿ ನಂಬಿಸಿ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ಯುವತಿ ದೂರಿದ್ದಾಳೆ.

​ಮೋಸದ ಆರೋಪ ಹಾಗೂ ನ್ಯಾಯಕ್ಕಾಗಿ ಆಗ್ರಹ:

ಮದುವೆ ವಿಚಾರ ಪ್ರಸ್ತಾಪಿಸಿದಾಗಲೆಲ್ಲಾ “ಮುಂದೆ ನೋಡೋಣ” ಎಂದು ದಿನ ದೂಡುತ್ತಿದ್ದ ಅಕ್ಷಯ, ಇದೀಗ ದಿಢೀರನೆ ಮದುವೆಯಾಗಲು ಸಾಧ್ಯವಿಲ್ಲ ಎಂದು ನಿರಾಕರಿಸುತ್ತಿದ್ದಾನೆ. ಇದರಿಂದ ತನಗೆ ತೀವ್ರ ಅನ್ಯಾಯವಾಗಿದ್ದು, ಪ್ರೀತಿ ಹಾಗೂ ನ್ಯಾಯ ಸಿಗುವವರೆಗೆ ಸ್ಥಳದಿಂದ ಕದಲುವುದಿಲ್ಲವೆಂದು ಪಟ್ಟು ಹಿಡಿದು ಆತನ ಮನೆ ಮುಂದೆ ಯುವತಿ ಧರಣಿ ಆರಂಭಿಸಿದ್ದಾಳೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!