ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಹೊಸಕೋಟೆಯಲ್ಲಿ ತಾಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ

Share News

ಹೊಸಕೋಟೆ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಪ್ರಜಾ ಸೇವಾ ಆಂದೋಲನ’ದ ಭಾಗವಾಗಿ ಹೊಸಕೋಟೆ ಟೌನ್‌ನ ಯಾದವ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿದರು.

​ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಜಂಟಿಯಾಗಿ ಆಯೋಜಿಸಲಾಗಿದ್ದ ಈ ಸಭೆಯಲ್ಲಿ, ತಾಲೂಕಿನ ನಾನಾ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರ ಕುಂದು-ಕೊರತೆ ಹಾಗೂ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳು ಸುದೀರ್ಘವಾಗಿ ಆಲಿಸಿದರು.

​ಸ್ಥಳದಲ್ಲೇ ಪರಿಹಾರಕ್ಕೆ ಸೂಚನೆ:

ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಸ್ಥಳದಲ್ಲೇ ಬಗೆಹರಿಸಬಹುದಾದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

​ಪ್ರತಿ ಶನಿವಾರ ಸಭೆ:

‘ಬಾಗಿಲಿಗೆ ಬಂತು ಸರ್ಕಾರ, ಸರ್ಕಾರದ ಸೇವೆಗೆ ಇರಲಿ ನಿಮ್ಮ ಸಹಕಾರ’ ಎಂಬ ಧೈಯವಾಕ್ಯದೊಂದಿಗೆ ಪ್ರಜಾ ಸೇವಾ ಇಲಾಖೆಯ ಮೂಲಕ ಈ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರವೇ ನೇರವಾಗಿ ಜನರ ಬಳಿಗೆ ತೆರಳಿ ಕುಂದುಕೊರತೆ ಆಲಿಸುವ ನಿಟ್ಟಿನಲ್ಲಿ ಪ್ರತಿ ಶನಿವಾರ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಈ ಸಭೆಗಳನ್ನು ಆಯೋಜಿಸಲಾಗುತ್ತಿದೆ.

​ಹಿರಿಯ ಅಧಿಕಾರಿಗಳ ಭಾಗಿ:

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ವಾಸಂತಿ ಅಮರ್, ಉಪವಿಭಾಗಾಧಿಕಾರಿ (AC) ಮಂಜುನಾಥ್, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ವಿವಿಧ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!