ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಕೆಪಿಎಸ್ಸಿ ಅಕ್ರಮ ಬಯಲು: ದಲ್ಲಾಳಿಗಳಿಗೆ ಸಾಥ್ ನೀಡುತ್ತಿದ್ದ ಇಬ್ಬರು ಸಿಬ್ಬಂದಿ ಬಂಧನ

Share News

ಬೆಂಗಳೂರು: ಕೆಪಿಎಸ್ಸಿ (KPSC) ಪರೀಕ್ಷಾ ಅಕ್ರಮ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಲ್ಲಾಳಿಗಳೊಂದಿಗೆ ಶಾಮೀಲಾಗಿದ್ದ ಕೆಪಿಎಸ್ಸಿಯ ಇಬ್ಬರು ಸಿಬ್ಬಂದಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

​ಸೀನಿಯರ್ ಅಸಿಸ್ಟೆಂಟ್ ಸ್ವಾಮಿದಾಸ್ ಹಾಗೂ ಟೆಕ್ನಿಕಲ್ ಅಸಿಸ್ಟೆಂಟ್ ಶರಣಪ್ಪ ಬಂಧಿತ ಸಿಬ್ಬಂದಿಗಳು.

​ಅಕ್ರಮ ನಡೆದಿದ್ದು ಹೇಗೆ?

ಕಳೆದ ಜನವರಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಕಿರಿಯ ಎಂಜಿನಿಯರ್ (JE) ಹುದ್ದೆಗೆ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯ ಅರ್ಹತಾ ಪಟ್ಟಿಯಲ್ಲಿದ್ದ ಅಭ್ಯರ್ಥಿಗಳು ಮತ್ತು ಗರಿಷ್ಠ ಅಂಕ ಪಡೆದವರ ಮೊಬೈಲ್ ಸಂಖ್ಯೆಗಳನ್ನು ಕೆಪಿಎಸ್ಸಿಯ ಈ ಸಿಬ್ಬಂದಿಗಳು ದಲ್ಲಾಳಿಗಳಿಗೆ ಸೋರಿಕೆ ಮಾಡುತ್ತಿದ್ದರು. ಈ ಮಾಹಿತಿಯನ್ನು ಆಧರಿಸಿ ದಲ್ಲಾಳಿಗಳು ಅಭ್ಯರ್ಥಿಗಳನ್ನು ಸಂಪರ್ಕಿಸಿ, “ಸಂದರ್ಶನದಲ್ಲಿ ಪಾಸ್ ಮಾಡಿಸಿ, ಅಂತಿಮ ಆಯ್ಕೆ ಪಟ್ಟಿಯಲ್ಲಿ ಹೆಸರು ಬರುವಂತೆ ನೋಡಿಕೊಳ್ಳುತ್ತೇವೆ” ಎಂದು ಹಣಕ್ಕೆ ಬೇಡಿಕೆ ಇಟ್ಟು ವಂಚಿಸಲು ಯತ್ನಿಸುತ್ತಿದ್ದರು.

​ಆಡಿಯೋ ಸಾಕ್ಷಿ ಆಧರಿಸಿ ದೂರು:

ದಲ್ಲಾಳಿಗಳು ಕರೆ ಮಾಡಿ ಮಾತನಾಡಿದ್ದ ಆಡಿಯೋ ರೆಕಾರ್ಡಿಂಗ್‌ಗಳ ಸಮೇತ ಅಭ್ಯರ್ಥಿಗಳು ಕೆಪಿಎಸ್ಸಿಗೆ ದೂರು ನೀಡಿದ್ದರು. ಪ್ರಕರಣದ ಗಂಭೀರತೆ ಅರಿತ ಕೆಪಿಎಸ್ಸಿ ಕಾರ್ಯದರ್ಶಿ ಕಳೆದ ಫೆಬ್ರವರಿಯಲ್ಲಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ಚುರುಕುಗೊಳಿಸಿದ್ದ ಪೊಲೀಸರು ಈ ಹಿಂದೆ ನಾಲ್ವರು ದಲ್ಲಾಳಿಗಳನ್ನು ಬಂಧಿಸಿದ್ದರು. ಇದೀಗ ಅಕ್ರಮಕ್ಕೆ ಸಹಕರಿಸಿದ್ದ ಇಲಾಖೆಯ ಇಬ್ಬರು ಆಂತರಿಕ ಸಿಬ್ಬಂದಿಗಳನ್ನು ಕಂಬಿ ಹಿಂದೆ ತಳ್ಳಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!