ಜಿಲ್ಲಾ ಸುದ್ದಿಉಪಯುಕ್ತ ಮಾಹಿತಿಗಳುಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸ್ಥಳೀಯ ಸುದ್ದಿಗಳು

ಮಾದಕ ದ್ರವ್ಯ ತಡೆಗೆ ಕಠಿಣ ಕ್ರಮಕ್ಕಾಗಿ ಪೊಲೀಸ್ ಅಧೀಕ್ಷಕರಿಗೆ ನಮ್ಮ ಕರ್ನಾಟಕ ಸೇನೆ ಮನವಿ!

Share News

ಉಡುಪಿ: ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಮಾದಕ ದ್ರವ್ಯ (ಡ್ರಗ್ಸ್) ಜಾಲಕ್ಕೆ ಕಡಿವಾಣ ಹಾಕಲು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ‘ನಮ್ಮ ಕರ್ನಾಟಕ ಸೇನೆ’ ಸಂಘಟನೆಯ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಮ್ ಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

​ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಹಲವಾರು ಅನಾಹುತ ಹಾಗೂ ಅಪರಾಧ ಘಟನೆಗಳಿಗೆ ಮಾದಕ ದ್ರವ್ಯದ ವ್ಯಸನವೇ ಪ್ರಮುಖ ಕಾರಣವೆಂದು ಶಂಕಿಸಲಾಗಿದೆ. ಇತ್ತೀಚೆಗೆ ವೈದ್ಯರು ಸೇರಿದಂತೆ ಹಲವು ಶಿಕ್ಷಣತಜ್ಞರು, ಯುವಕರು ಹಾಗೂ ಆಧುನಿಕ ತರಬೇತಿ ಪಡೆದ ಪ್ರಜೆಗಳು ಇಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇದನ್ನು ಹೀಗೆಯೇ ಬಿಟ್ಟರೆ ದೇಶಕ್ಕೆ ದಿವಂಗತ ಎ.ಪಿ.ಜೆ. ಅಬ್ದುಲ್ ಕಲಾಂ ಹಾಗೂ ದಕ್ಷಿಣ ಕನ್ನಡ ಕಂಡ ದಕ್ಷ ಐಪಿಎಸ್ ಅಧಿಕಾರಿ ದಿವಂಗತ ಮಧುಕರ್ ಶೆಟ್ಟಿ ಅವರಂತಹ ಶ್ರೇಷ್ಠ ವ್ಯಕ್ತಿತ್ವಗಳು ಸಿಗದಂತಾಗುವ ಆತಂಕವಿದೆ ಎಂದು ಸಂಘಟನೆ ಕಳವಳ ವ್ಯಕ್ತಪಡಿಸಿದೆ.

​ಜನಸಾಮಾನ್ಯರನ್ನು ‘ಗುಪ್ತಚರ’ರನ್ನಾಗಿ ಬಳಸಲು ಸಲಹೆ:

ಪ್ರತಿಯೊಂದು ಊರಿನಲ್ಲಿ ಜನಸಾಮಾನ್ಯರನ್ನು ಸ್ಥಳೀಯ ಗುಪ್ತಚರ ಇಲಾಖೆಯ ಪ್ರತಿನಿಧಿಗಳನ್ನಾಗಿ (ಖಬರಿ) ನೇಮಿಸಿಕೊಂಡು, ಗುಪ್ತವಾಗಿ ನಡೆಯುತ್ತಿರುವ ಮಾದಕ ದ್ರವ್ಯ ಮಾರಾಟ ಜಾಲವನ್ನು ಪತ್ತೆಹಚ್ಚಿ ಮಟ್ಟಹಾಕಲು ಪೊಲೀಸ್ ಇಲಾಖೆ ತಕ್ಷಣವೇ ಮುಂದಾಗಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

​ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸುಜಯ್ ಪೂಜಾರಿ, ಜಿಲ್ಲಾ ಗೌರವಾಧ್ಯಕ್ಷ ಲಕ್ಷ್ಮೀಶ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಆನಂದ್ ಶೆಟ್ಟಿ, ಜಿಲ್ಲಾ ಗೌರವ ಸಲಹೆಗಾರರಾದ ಪ್ರಕಾಶ್ ದೇವಾಡಿಗ ಹಾಗೂ ತೇಜಸ್ ರಾವ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುಬ್ಬಣ್ಣ ಕಾಮತ್, ಜಿಲ್ಲಾ ಕಾರ್ಮಿಕ ವಿಭಾಗದ ಅಧ್ಯಕ್ಷ ಸಿದ್ದಣ್ಣ ಎಸ್. ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಸರ್ವೋತ್ತಮ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಗಣೇಶ್ ಆಚಾರ್ಯ, ಜಿಲ್ಲಾ ಸದಸ್ಯರಾದ ಅನಿಲ್, ಸುಕುಮಾರ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!