Crime Newsಕ್ರೈಂ ಸುದ್ದಿಜಿಲ್ಲಾ ಸುದ್ದಿರಾಜ್ಯ ಸುದ್ದಿ

ಕುಂದಾಪುರ: ವೀಲಿಂಗ್ ನಡೆಸಿ ವಿಡಿಯೋ ವೈರಲ್ ಮಾಡಿದ್ದ ಯುವಕ ಈಗ ಕಳ್ಳತನ ಪ್ರಕರಣದಲ್ಲಿ ಅರೆಸ್ಟ್!

Share News

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಡಿಗೆ ಸ್ಕೂಟರ್ ಬಳಸಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ನಡೆಸಿ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಮಾಡಿದ್ದ ಯುವಕ, ಈಗ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಳ್ಳತನ ಯತ್ನ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.

​ಬಂಧಿತ ಆರೋಪಿಯನ್ನು ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೋಣಮಕ್ಕಿ ನಿವಾಸಿ ಪೌಜಾನ್ ಅಹ್ಮದ್ ಎಂದು ಗುರುತಿಸಲಾಗಿದೆ.

ಶಿರೂರು ಗ್ರಾಮದ ಕೋಣಮಕ್ಕಿ ಎಂಬಲ್ಲಿ ಪಾತಿಮಾ ಎಂಬುವವರ ಮನೆಯ ಹಿಂಬಾಗಿಲು ಒಡೆದು ಒಳನುಗ್ಗಿದ ಆರೋಪಿ, ಮನೆಯಲ್ಲಿದ್ದ ಗೋದ್ರೇಜ್ ಅಲಮಾರಿಯನ್ನು ತೆರೆದು ಕಳ್ಳತನಕ್ಕೆ ಯತ್ನಿಸಿದ್ದಾನೆ. ಈ ವೇಳೆ ಶಬ್ದ ಕೇಳಿ ಎಚ್ಚರಗೊಂಡ ಪಾತಿಮಾ ಅವರು ಜೋರಾಗಿ ಕೂಗಿಕೊಂಡಾಗ, ಗಾಬರಿಗೊಂಡ ಆರೋಪಿ ಹಿಂಬಾಗಿಲಿನಿಂದ ಪರಾರಿಯಾಗಿದ್ದನು. ಈ ಬಗ್ಗೆ ದಾಖಲಾದ ದೂರಿನನ್ವಯ (ಅಪರಾಧ ಕ್ರಮಾಂಕ 30/2026) ತನಿಖೆ ನಡೆಸಿದ ಬೈಂದೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದೇ ಆರೋಪಿಯು ಹೆಮ್ಮಾಡಿ–ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಉತ್ತರ ಕನ್ನಡ ಭಾಗದಿಂದ ಬಾಡಿಗೆಗೆ ತಂದಿದ್ದ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಅತಿ ವೇಗ ಹಾಗೂ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡಿದ್ದನು. ಚಲಿಸುವ ವಾಹನದಲ್ಲೇ ವಿವಿಧ ಸರ್ಕಸ್ ಪ್ರದರ್ಶಿಸಿ ಸಾರ್ವಜನಿಕರ ಜೀವಕ್ಕೆ ಸಂಚಕಾರ ತಂದಿದ್ದನು. ಈ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಆರೋಪಿಯ ವಿರುದ್ಧ ಈಗ ಎರಡು ಕಡೆ ಪ್ರಕರಣಗಳು ದಾಖಲಾಗಿವೆ:

​ಬೈಂದೂರು ಠಾಣೆ: ಕಳ್ಳತನ ಯತ್ನಕ್ಕೆ ಸಂಬಂಧಿಸಿದಂತೆ BNS ಕಲಂ 331(4), 305, 62 ಅಡಿಯಲ್ಲಿ ಪ್ರಕರಣ.

​ಕುಂದಾಪುರ ಸಂಚಾರ ಠಾಣೆ: ವೀಲಿಂಗ್ ನಡೆಸಿದ ಸಂಬಂಧ BNS ಕಲಂ 281, 125 ಹಾಗೂ ಮೋಟಾರ್ ವಾಹನ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಾಗಿದೆ.

​ಬಾಡಿಗೆ ವಾಹನ ಪಡೆದು ಇಂತಹ ಪುಂಡಾಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!