ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಶಿವಮೊಗ್ಗ: 7ನೇ ತರಗತಿ ಪ್ರವೇಶಕ್ಕೆ ಲಂಚ ಪಡೆಯುತ್ತಿದ್ದ ವಸತಿ ಶಾಲೆ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ

Share News

ಶಿವಮೊಗ್ಗ: 7 ನೇ ತರಗತಿಯ ಪ್ರವೇಶಾತಿ ನೀಡಲು ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ವಸತಿ ಶಾಲೆಯ ಪ್ರಾಂಶುಪಾಲರೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ನಡೆದಿದೆ.

​ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ. ಚಂದ್ರಶೇಖರ್ ಅವರ ನೇತೃತ್ವದಲ್ಲಿ ನಡೆಸಲಾದ ದಾಳಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

​ಹುಣಸೆಕಟ್ಟೆ ಗ್ರಾಮದ ವಸತಿ ಶಾಲೆಯಲ್ಲಿ 7 ನೇ ತರಗತಿಯ ಪ್ರವೇಶಕ್ಕಾಗಿ ಹಾಗೂ ಶಾಲೆಯ ಡ್ರಮ್ ಸೆಟ್‌ ಕೊಡುವ ನೆಪದಲ್ಲಿ ಪ್ರಾಂಶುಪಾಲರು ಚಂದ್ರಪ್ಪ ಎಂಬುವರಿಂದ ಒಟ್ಟು ₹20,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

​ಈ ಕುರಿತು ನೀಡಿದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ಯೋಜನೆ ರೂಪಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಚಂದ್ರಪ್ಪ ಎಂಬುವವರಿಂದ ಶಾಲೆಯ ಕೊಠಡಿಯಲ್ಲೇ ಮುಂಗಡವಾಗಿ ₹10,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ರೆಡ್‌ಹ್ಯಾಂಡ್‌ ಆಗಿ ವಶಕ್ಕೆ ಪಡೆದಿದ್ದಾರೆ.

​ದಾಳಿಯ ಸಂದರ್ಭದಲ್ಲಿ ಆರೋಪಿಯಿಂದ ಲಂಚದ ಹಣವನ್ನು ವಶಪಡಿಸಿಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ತನಿಖೆ ಕೈಗೊಂಡಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!