Crime Newsಉಪಯುಕ್ತ ಮಾಹಿತಿಗಳುಕ್ರೈಂ ಸುದ್ದಿಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿ

ಸಂಕೇಶ್ವರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಂತರಾಜ್ಯ ಬೈಕ್ ಕಳ್ಳರ ಬಂಧನ; 18.30 ಲಕ್ಷ ಮೌಲ್ಯದ 27 ಬೈಕ್ ವಶ

Share News

ಬೆಳಗಾವಿ: ಜಿಲ್ಲೆಯ ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಖದೀಮರ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ವಿರೂಪಾಕ್ಷ ಕಣಬರಗಿ ಹಾಗೂ ಫಕೀರಪ್ಪ ಕರಿಗಾರ ಎಂದು ಗುರುತಿಸಲಾಗಿದೆ. ಇವರು ಸಂಕೇಶ್ವರ ಸೇರಿದಂತೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮತ್ತು ಅಕ್ಕಪಕ್ಕದ ರಾಜ್ಯಗಳಲ್ಲಿ ಬೈಕ್ ಕಳ್ಳತನದಲ್ಲಿ ತೊಡಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಕಾರ್ಯಾಚರಣೆಯ ವೇಳೆ ಆರೋಪಿಗಳಿಂದ ಒಟ್ಟು 18.30 ಲಕ್ಷ ರೂಪಾಯಿ ಮೌಲ್ಯದ 27 ಬೈಕ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತನಿಖೆಯ ವೇಳೆ ಈ ಇಬ್ಬರೂ ಆರೋಪಿಗಳು ವಿವಿಧೆಡೆ ಒಟ್ಟು 27 ಬೈಕ್‌ಗಳನ್ನು ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಆರೋಪಿಗಳು ಕೇವಲ ಸಂಕೇಶ್ವರಕ್ಕೆ ಸೀಮಿತವಾಗದೆ, ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಾಗೂ ನೆರೆ ರಾಜ್ಯದ ಗಡಿ ಭಾಗಗಳಲ್ಲಿ ವ್ಯವಸ್ಥಿತವಾಗಿ ಬೈಕ್ ಕಳ್ಳತನ ಮಾಡುತ್ತಿದ್ದರು. ಇವರ ಬಂಧನದಿಂದಾಗಿ ಹಲವು ಠಾಣೆಗಳಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಗಳು ಇತ್ಯರ್ಥಗೊಂಡಿವೆ.

ಅಂತರಾಜ್ಯ ಕಳ್ಳರನ್ನು ಪತ್ತೆ ಹಚ್ಚಿ, ಬೃಹತ್ ಪ್ರಮಾಣದ ವಾಹನಗಳನ್ನು ವಶಪಡಿಸಿಕೊಂಡ ಸಂಕೇಶ್ವರ ಪೊಲೀಸರ ಈ ಶ್ಲಾಘನೀಯ ಕಾರ್ಯಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕೆ. ರಾಮರಾಜನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತನಿಖೆಯಲ್ಲಿ ಭಾಗವಹಿಸಿದ್ದ ತಂಡಕ್ಕೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!