ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿ
ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ತಾಯಿ-ಮಗಳು ನಾಪತ್ತೆ: ಶೋಧ ಕಾರ್ಯ ತೀವ್ರ

ವಿಜಯನಗರ: ತುಂಗಭದ್ರಾ ನದಿಯ ಸ್ನಾನಘಟ್ಟದಲ್ಲಿ ಸ್ನಾನ ಮಾಡಲು ತೆರಳಿದ್ದ ತಾಯಿ ಹಾಗೂ ಮಗಳು ನೀರಿನಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿರುವ ಆತಂಕಕಾರಿ ಘಟನೆ ಹಂಪಿ ಪ್ರವಾಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಪತ್ತೆಯಾಗಿರುವ ತಾಯಿ-ಮಗಳನ್ನು ಶೀಘ್ರವಾಗಿ ಪತ್ತೆಹಚ್ಚಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ನದಿ ಪಾತ್ರದಲ್ಲಿ ತೀವ್ರ ಶೋಧ ನಡೆಸುವಂತೆ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಂಧಿತರ ಪತ್ತೆಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ನದಿಯಲ್ಲಿ ಗಾಳ ಹಾಕಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



