ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ವಕೀಲರ ಸಂಘದ ನೂತನ ಅಧ್ಯಕ್ಷ ಎಂ.ಮಂಜುನಾಥರೆಡ್ಡಿಗೆ ಜೆಡಿಎಸ್ ಮುಖಂಡರಿಂದ ಭವ್ಯ ಸನ್ಮಾನ

Share News

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ವಕೀಲರ ಸಂಘಕ್ಕೆ ಅಧ್ಯಕ್ಷರಾಗಿ ನೂತನವಾಗಿ ಅವಿರೋಧ ಆಯ್ಕೆಯಾಗಿರುವ ಎಂ.ಮಂಜುನಾಥರೆಡ್ಡಿ ಅವರಿಗೆ ಜೆಡಿಎಸ್ ಮುಖಂಡರು ಹಾಗೂ ಅಭಿಮಾನಿಗಳು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.

​ತಾಲ್ಲೂಕಿನ ಊಲವಾಡಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮಂಜುನಾಥರೆಡ್ಡಿ ಅವರಿಗೆ ಹೂಮಾಲೆ ಹಾಕಿ,ಶಾಲು ಹೊದಿಸಿ ಶ್ರೇಷ್ಠವಾಗಿ ಸನ್ಮಾನಿಸಲಾಯಿತು.

​ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಯುವ ಮುಖಂಡ ಚೇತನ್ ನಮ್ಮ ಗ್ರಾಮ ಹಾಗೂ ತಾಲ್ಲೂಕಿನ ಹಿರಿಯ ನಾಯಕರಾದ ಮಂಜುನಾಥರೆಡ್ಡಿ ಅವರು ಸತತವಾಗಿ ಎರಡನೇ ಬಾರಿ ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಊಲವಾಡಿ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಿರಿಯರು ಹಾಗೂ ಅಭಿಮಾನಿಗಳು ಸೇರಿ ಅವರಿಗೆ ಗೌರವಪೂರ್ವಕವಾಗಿ ಸನ್ಮಾನ ಮಾಡಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದರು.

​ಕಾರ್ಯಕ್ರಮದಲ್ಲಿ ಊಲವಾಡಿ ಗ್ರಾಮ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಹಲವಾರು ಜೆಡಿಎಸ್ ಮುಖಂಡರು, ನಾಯಕರು ಹಾಗೂ ಅಭಿಮಾನಿಗಳು ಹಾಜರಿದ್ದರು.

ವರದಿ:ಕೆ.ಮುತ್ತಕದಹಳ್ಳಿ ವೆಂಕಟಾಚಲಪತಿ ಪೊಲೀಸ್ ವಾರ್ತೆ ಚಿಕ್ಕಬಳ್ಳಾಪುರ ಜಿಲ್ಲಾ ವರದಿಗಾರರು


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!