ಜಿಲ್ಲಾ ಸುದ್ದಿಉಪಯುಕ್ತ ಮಾಹಿತಿಗಳುಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿ

ಬೆಳ್ಳಿ ಆಭರಣ ಕಳವು: ವಾರದೊಳಗೆ ಪ್ರಕರಣ ಭೇದಿಸಿ ಐವರನ್ನು ಬಂಧಿಸಿದ ಕಿತ್ತೂರು ಪೊಲೀಸರು

Share News

ಕಿತ್ತೂರು: ಇಲ್ಲಿನ ಪ್ರಸಿದ್ಧ ಬಂಗಾರದ ಅಂಗಡಿಯೊಂದರಲ್ಲಿ ನಡೆದಿದ್ದ ಭಾರಿ ಕಳವು ಪ್ರಕರಣವನ್ನು ಕಿತ್ತೂರು ಠಾಣೆ ಪೊಲೀಸರು ಕೇವಲ ಒಂದೇ ವಾರದಲ್ಲಿ ಯಶಸ್ವಿಯಾಗಿ ಭೇದಿಸಿದ್ದಾರೆ.

​ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ನಾಲ್ವರು ಹಾಗೂ ಮಧ್ಯಪ್ರದೇಶದ ಒಬ್ಬ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಲಾಗಿದೆ.

​₹22 ಲಕ್ಷ ಮೌಲ್ಯದ ಬೆಳ್ಳಿ ವಶ:

ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಸುಮಾರು ₹22 ಲಕ್ಷ ಮೌಲ್ಯದ 7 ಕೆ.ಜಿ. ಬೆಳ್ಳಿಯ ಆಭರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

​ಸವಾಲಾಗಿದ್ದ ಈ ಕಳವು ಪ್ರಕರಣವನ್ನು ಅತ್ಯಂತ ತ್ವರಿತವಾಗಿ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ತನಿಖಾ ತಂಡ ಹಾಗೂ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ಕಾರ್ಯಕ್ಷಮತೆಗೆ ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ಕೆ. ರಾಮರಾಜನ್ ಅವರು ವಿಶೇಷ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!