ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ – ಕೋಟ್ಯಂತರ ಮೌಲ್ಯದ ಸರ್ಕಾರಿ ಜಮೀನು ವಶಕ್ಕೆ

Share News

ಬಳ್ಳಾರಿ: ಜಿಲ್ಲಾಡಳಿತವು ಬಳ್ಳಾರಿ ತಾಲೂಕಿನ ಮುಂಡರಗಿ ಕೈಗಾರಿಕಾ ಪ್ರದೇಶದ (ಹಂತ-1) ವ್ಯಾಪ್ತಿಯಲ್ಲಿ ತೆರವು ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಅಕ್ರಮವಾಗಿ ಒತ್ತುವರಿಯಾಗಿದ್ದ ಕೋಟ್ಯಂತರ ಮೌಲ್ಯದ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದೆ.

​ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ಬೆಳಿಗ್ಗೆ ಈ ಬೃಹತ್ ತೆರವು ಕಾರ್ಯಾಚರಣೆ ನಡೆಯಿತು. ಮುಂಡರಗಿ ಗ್ರಾಮದ ಸರ್ವೇ ಸಂಖ್ಯೆ 177/2 ರ ವ್ಯಾಪ್ತಿಯಲ್ಲಿ 1.07 ಎಕರೆ ಸರ್ಕಾರಿ ಜಮೀನನ್ನು ಅತಿಕ್ರಮಿಸಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್‌ಗಳನ್ನು ಬುಲ್ಡೋಜರ್ ಮೂಲಕ ನೆಲಸಮಗೊಳಿಸಲಾಯಿತು. ಇದರೊಂದಿಗೆ ಸರ್ವೇ ಸಂಖ್ಯೆ 322 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದ್ದ 11.40 ಎಕರೆ ಖರಾಬು ಜಮೀನನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.

​ಎಚ್ಚರಿಕೆ ಫಲಕ ಅಳವಡಿಕೆ:

ಅನಧಿಕೃತವಾಗಿ ಸರ್ಕಾರಿ ಆಸ್ತಿಗಳನ್ನು ಕಬಳಿಸಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ತೆರವುಗೊಳಿಸಿದ ಜಮೀನಿನ ಜಾಗದಲ್ಲಿ ‘ಈ ಜಾಗವು ಸರ್ಕಾರಕ್ಕೆ ಸೇರಿದ್ದು, ಅತಿಕ್ರಮಣ ಮಾಡುವುದು ಶಿಕ್ಷಾರ್ಹ ಅಪರಾಧ’ ಎಂಬ ಮುನ್ನೆಚ್ಚರಿಕೆ ಫಲಕವನ್ನು ಅಳವಡಿಸಲಾಗಿದೆ.

​ಕಾರ್ಯಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಈ ತೆರವು ಕಾರ್ಯಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್., ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಬಳ್ಳಾರಿ ತಾಲೂಕು ತಹಶೀಲ್ದಾರ್ ಟಿ. ರೇಖಾ, ಕಂದಾಯ ನಿರೀಕ್ಷಕರು (RI), ಗ್ರಾಮ ಆಡಳಿತಾಧಿಕಾರಿಗಳು (VAO) ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂದಿ ಭಾಗವಹಿಸಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!