ಜಿಲ್ಲಾ ಸುದ್ದಿರಾಜ್ಯ ಸುದ್ದಿಸ್ಥಳೀಯ ಸುದ್ದಿಗಳು
ನಿವೃತ್ತ ಎಎಸ್‌ಐ ರಮೇಶ ನಾಯ್ಕ ವಿಧಿವಶ: ವಿವಿಧ ಗಣ್ಯರಿಂದ ಸಂತಾಪ

ಭಟ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ರಮೇಶ ನಾರಾಯಣ ನಾಯ್ಕ (76) ಅವರು ಗುರುವಾರ ಬೆಳಗಿನ ಜಾವ ಶಿರಾಲಿ ಸಾಲೆಮನೆಯ ತಮ್ಮ ಸ್ವಗೃಹದಲ್ಲಿ ನಿಧನರಾದರು.
ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿ, ಅಳಿಯ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ರಮೇಶ ನಾಯ್ಕ ಅವರ ಅಗಲಿಕೆಗೆ ಇಲಾಖೆಯ ಸಿಬ್ಬಂದಿ, ಕುಟುಂಬಸ್ಥರು, ಬಂಧುಗಳು ಹಾಗೂ ಗ್ರಾಮಸ್ಥರು ತೀವ್ರ ಕಂಬನಿ ಮಿಡಿದಿದ್ದಾರೆ.



