ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸ್ಥಳೀಯ ಸುದ್ದಿಗಳು

ರಾಜಾನುಕುಂಟೆ ಖಾಸಗಿ ಕಾಲೇಜಿನಲ್ಲಿ ಘಟನೆ: ಗಾಯಾಳು ಉಪನ್ಯಾಸಕಿ ಆಸ್ಪತ್ರೆಗೆ ದಾಖಲು, ಆರೋಪಿ ತಂದೆ ಬಂಧನ

Share News

​ಬೆಂಗಳೂರು: ಮದುವೆ ಹಾಗೂ ಹಣದ ವಿಚಾರಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ, ಖಾಸಗಿ ಕಾಲೇಜೊಂದರ ಸಹಾಯಕ ಪ್ರಾಧ್ಯಾಪಕಿಯಾಗಿ (ಅಸಿಸ್ಟೆಂಟ್ ಪ್ರೊಫೆಸರ್) ಕರ್ತವ್ಯ ನಿರ್ವಹಿಸುತ್ತಿದ್ದ ಮಗಳ ಮೇಲೆಯೇ ತಂದೆಯೊಬ್ಬ ಚಾಕುವಿನಿಂದ ಭೀಕರವಾಗಿ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಬೆಂಗಳೂರು ಉತ್ತರ ತಾಲೂಕಿನ ರಾಜಾನುಕುಂಟೆಯಲ್ಲಿ ನಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮದುವೆಯ ವೆಚ್ಚ, ಹಣದ ಬೇಡಿಕೆ ಹಾಗೂ ಮಗಳ ಸಂಬಳದ ವಿಚಾರವಾಗಿ ಕುಟುಂಬದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಭಿನ್ನಾಭಿಪ್ರಾಯ ಮತ್ತು ಕಲಹ ನಡೆಯುತ್ತಿತ್ತು. ಇದೇ ಆಕ್ರೋಶದಲ್ಲಿದ್ದ ಆರೋಪಿ ತಂದೆ, ಮಗಳು ಕೆಲಸ ಮಾಡುತ್ತಿದ್ದ ರಾಜಾನುಕುಂಟೆಯ ಖಾಸಗಿ ಕಾಲೇಜಿಗೆ ಭೇಟಿ ನೀಡಿದ್ದಾನೆ. ಮಗಳನ್ನು ಭೇಟಿಯಾಗುವ ನೆಪದಲ್ಲಿ ಕಾಲೇಜಿನ ಒಳನುಗ್ಗಿದ ಆತ, ಏಕಾಏಕಿ ಚಾಕುವಿನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

​ಘಟನೆಗೆ ಸಂಬಂಧಿಸಿದಂತೆ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಕಾಲೇಜು ಅವರಣದಲ್ಲೇ ನಡೆದ ಈ ಘಟನೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ತೀವ್ರ ಆತಂಕ ಮೂಡಿಸಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!