ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ನಿಂತಿದ್ದ ಲಾರಿಗೆ ಕಾರು ಭೀಕರ ಡಿಕ್ಕಿ: 8 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

Share News

ತಿರುವನಂತಪುರಂ: ನಿಲ್ಲಿಸಿದ್ದ ಗೂಡ್ಸ್ ಲಾರಿಯ ಹಿಂಭಾಗಕ್ಕೆ ರಭಸವಾಗಿ ಕಾರು ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ದಾರುಣವಾಗಿ ಕೊನೆಯುಸಿರೆಳೆದ ಭೀಕರ ಘಟನೆ ಕೇರಳದ ತ್ರಿಶ್ಯೂರು ಜಿಲ್ಲೆಯ ಕೈಪಮಂಗಲಂ ಸಮೀಪ ನಡೆದಿದೆ.

​ಮೃತರನ್ನು ತಮಿಳುನಾಡಿನ ಸೇಲಂ ಮೂಲದ ವಿಶ್ವ (20), ದಿಂಡಿಗಲ್ ಮೂಲದ ಸೂರ್ಯ (20), ಯುವಸಂಜಿತ್ (20) ಹಾಗೂ ಮಧುರೈ ಮೂಲದ ಸಂತೋಷ್ (20) ಮತ್ತು ಪ್ರಸನ್ನ ಎಂದು ಗುರುತಿಸಲಾಗಿದ್ದು, ಉಳಿದ ಮೂವರ ಗುರುತು ಪತ್ತೆಯಾಗಬೇಕಿದೆ. ಮೃತರೆಲ್ಲರೂ ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಪಿ.ಎಸ್.ಎಂ. ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

​ಘಟನೆಯ ವಿವರ:

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೈಪಮಂಗಲಂ ಸಮೀಪದ ಪನಂಬಿಕ್ಕುನ್ನು ಸೆಂಟರ್‌ನ ರಸ್ತೆ ತಿರುವಿನಲ್ಲಿ ಲಾರಿಯೊಂದನ್ನು ನಿಲ್ಲಿಸಲಾಗಿತ್ತು. ಮಧ್ಯರಾತ್ರಿ ಸುಮಾರಿಗೆ ವೇಗವಾಗಿ ಬಂದ ತಮಿಳುನಾಡು ನೋಂದಣಿಯ (TN 59 DW 8299) ಕಾರು ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

​ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಿದ್ಯಾರ್ಥಿಗಳು ಕಾರಿನೊಳಗೆ ಸಿಲುಕಿಕೊಂಡಿದ್ದರು. ಸ್ಥಳಕ್ಕೆ ಆಗಮಿಸಿದ ರಕ್ಷಣಾ ಸಿಬ್ಬಂದಿ ಕಾರಿನ ಬಿಡಿಭಾಗಗಳನ್ನು ಕತ್ತರಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಕೈಪಮಂಗಲಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!