ಗಾಂಧಿ ಬಜಾರ್ ಬೀದಿಬದಿ ವ್ಯಾಪಾರಿಗಳಿಗೆ ಸ್ಥಳಾವಕಾಶ: ಮಹಾನಗರ ಪಾಲಿಕೆ ಆಯುಕ್ತರ ಅಧ್ಯಕ್ಷತೆಯಲ್ಲಿ ಪ್ರಮುಖ ಸಭೆ

ಬೆಂಗಳೂರು: ಮಾನ್ಯ ಉಚ್ಚ ನ್ಯಾಯಾಲಯದ ಆದೇಶದಂತೆ ಗಾಂಧಿ ಬಜಾರ್ ಮುಖ್ಯ ರಸ್ತೆಯ ಬೀದಿಬದಿ ವ್ಯಾಪಾರಿಗಳಿಗೆ ಸ್ಯೆಂಟಿಫಿಕ್ ಆಗಿ ಸ್ಥಳಾವಕಾಶ ಕಲ್ಪಿಸುವ ಕುರಿತು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಜಗದೀಶ್.ಜಿ. ಅವರ ಅಧ್ಯಕ್ಷತೆಯಲ್ಲಿ ಪ್ರಮುಖ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ, ಪಾದಚಾರಿ ಮಾರ್ಗಗಳಲ್ಲಿ ‘ಲೈನಿಂಗ್ ಮಾರ್ಕ್’ (ಗಡಿ ಗುರುತು) ಮಾಡಿ, ನಿಗದಿಪಡಿಸಲಾದ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸುವ ಬಗ್ಗೆ ಕೂಲಂಕಷವಾಗಿ ಚರ್ಚಿಸಲಾಯಿತು.
ಗುರುತಿಸಿದ ಸ್ಥಳದಲ್ಲಷ್ಟೇ ವ್ಯಾಪಾರ: ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಪಾದಚಾರಿ ಮಾರ್ಗದಲ್ಲಿ ಮಾರ್ಕಿಂಗ್ ಮಾಡಲಾದ ನಿರ್ದಿಷ್ಟ ಜಾಗಗಳಲ್ಲಿ ಮಾತ್ರ ವ್ಯಾಪಾರಿಗಳು ವ್ಯಾಪಾರ ನಡೆಸಲು ಕ್ರಮ ಕೈಗೊಳ್ಳಲಾಗುವುದು.
ಸಂಚಾರ ದಟ್ಟಣೆ ನಿಯಂತ್ರಣ: ಪಾದಚಾರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ವಹಿಸಲಾಗುತ್ತಿದೆ.
ಈ ಮಹತ್ವದ ಸಭೆಯಲ್ಲಿ ಅಭಿವೃದ್ಧಿ ವಿಭಾಗದ ಅಪರ ಆಯುಕ್ತರಾದ ಶ್ರೀ ವೆಂಕಟಾಚಲಪತಿ, ಜಂಟಿ ಆಯುಕ್ತರಾದ ಶ್ರೀ ಹೇಮಂತ್ ಶರಣ್, ಸಂಬಂಧಪಟ್ಟ ಕಾರ್ಯಪಾಲಕ ಅಭಿಯಂತರರು (EE), ಕಲ್ಯಾಣ ವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳು (ARO) ಸೇರಿದಂತೆ ಹಲವು ಇಲಾಖಾ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



