ಫೋಕಸ್ ಆನ್ ನ್ಯೂಸ್ 2.0’ ರಾಷ್ಟ್ರಮಟ್ಟದ ಛಾಯಾಚಿತ್ರ ಪ್ರದರ್ಶನ ಹಾಗೂ ಕಾರ್ಯಾಗಾರ ಸಂಪನ್ನ: ವಿಜೇತರಿಗೆ ಬಹುಮಾನ ವಿತರಣೆ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ‘ಪತ್ರಿಕಾ ಛಾಯಾಗ್ರಾಹಕರಿಗೆ ರಾಷ್ಟ್ರಮಟ್ಟದ ಛಾಯಾಚಿತ್ರ ಪ್ರದರ್ಶನ, ಸ್ಪರ್ಧೆ ಹಾಗೂ ತರಬೇತಿ ಕಾರ್ಯಾಗಾರ’ – ಫೋಕಸ್ ಆನ್ ನ್ಯೂಸ್ 2.0 ಕಾರ್ಯಕ್ರಮದ ಸಮಾರೋಪ ಸಮಾರಂಭವು ಯಶಸ್ವಿಯಾಗಿ ನೆರವೇರಿತು.
ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದ ಸಚಿವರಾದ ರಾಮಲಿಂಗಾರೆಡ್ಡಿ ಅವರು ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಬಹುಮಾನ ವಿತರಿಸಿ, ಶುಭ ಹಾರೈಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರಾದ ಡಾ. ಬಿ.ಆರ್. ಮಮತಾ, ಚಿತ್ರಕಲಾ ಪರಿಷತ್ ಅಧ್ಯಕ್ಷರಾದ ಶ್ರೀ ಬಿ.ಎಲ್. ಶಂಕರ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಶ್ರೀ ಕೆ.ವಿ. ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ಶಿವಾನಂದ ತಗಡೂರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಆಯೆಷಾ ಖಾನಂ ಅವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯರಾದ ಎಚ್.ವಿ. ಕಿರಣ್, ಅಕಾಡೆಮಿ ಕಾರ್ಯದರ್ಶಿ ಎಲ್.ಪಿ. ಗಿರೀಶ್ ಸೇರಿದಂತೆ ಹಲವು ಗಣ್ಯರು ಹಾಗೂ ಪತ್ರಿಕಾ ಛಾಯಾಗ್ರಾಹಕರು ಉಪಸ್ಥಿತರಿದ್ದರು.



