ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ೧೨ ಕಳವು ಬೈಕ್‌ಗಳ ಜಪ್ತಿ, ಆರೋಪಿಗಳ ಬಂಧನ

Share News

ಕಲಬುರಗಿ: ಜಿಲ್ಲೆಯ ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದ್ದ ಮೋಟಾರ್ ಸೈಕಲ್ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಆಳಂದ ಪೊಲೀಸರು ಯಶಸ್ವಿಯಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಿ ಅವರಿಂದ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

​ಬಂಧಿತ ಆರೋಪಿಗಳಿಂದ ಒಟ್ಟು ೫.೪೪ ಲಕ್ಷ ರೂಪಾಯಿ ಅಂದಾಜು ಮೌಲ್ಯದ ೧೨ ಮೋಟಾರ್ ಸೈಕಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

​ಕಳವು ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿದ್ದ ಆಳಂದ ಪೊಲೀಸರ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ, ಜಪ್ತಿ ಪ್ರಕ್ರಿಯೆ ಪೂರ್ಣಗೊಳಿಸಿದೆ.

​ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ ಆರೋಪಿಗಳನ್ನು ಪತ್ತೆಹಚ್ಚಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡದ ಕಾರ್ಯವನ್ನು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅಡ್ಡೂರು ಶ್ರೀನಿವಾಸುಲು, IPS ಅವರು ಪ್ರಶಂಸಿದ್ದಾರೆ. ಸಾರ್ವಜನಿಕ ವಲಯದಲ್ಲೂ ಪೊಲೀಸರ ಈ ಕಾರ್ಯಾಚರಣೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!