ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು
ಕಡತಗಳ ನಿರ್ವಹಣೆಯಲ್ಲಿ ಅತ್ಯುತ್ತಮ ಸೇವೆ: ಪೊಲೀಸ್ ಸಿಬ್ಬಂದಿಗೆ ಡಿ ಸಿ ಪಿ ಶಾಲೂ ಶ್ಲಾಘನೆ

ಕಲಬುರಗಿ: ನಗರದ ನಗರ ಸಶಸ್ತ್ರ ಮೀಸಲು ಪಡೆ (ಸಿ.ಸಿ.ಆರ್.ಬಿ.) ಘಟಕದಲ್ಲಿ ಕಡತಗಳ ನಿರ್ವಹಣೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗೆ ಉಪ ಪೊಲೀಸ್ ಆಯುಕ್ತರಾದ (DCP) ಶಾಲೂ, ಐಪಿಎಸ್ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.
ಇಲಾಖೆಯಲ್ಲಿನ ಪ್ರಮುಖ ದಾಖಲೆಗಳು ಹಾಗೂ ಕಡತಗಳನ್ನು ಅತ್ಯಂತ ವ್ಯವಸ್ಥಿತವಾಗಿ ನಿರ್ವಹಿಸುವ ಮೂಲಕ ಗಮನ ಸೆಳೆದ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಗುರುತಿಸಿ ಉಪ ಪೊಲೀಸ್ ಆಯುಕ್ತರು ಮೆಚ್ಚುಗೆ ವ್ಯಕ್ತಪಡಿಸಿದರು.
ಪೊಲೀಸ್ ಇಲಾಖೆಯ ದೈನಂದಿನ ಆಡಳಿತದಲ್ಲಿ ದಾಖಲೆಗಳ ಸೂಕ್ತ ನಿರ್ವಹಣೆ ಅತ್ಯಂತ ಪ್ರಾಮುಖ್ಯತೆ ಹೊಂದಿದ್ದು, ಸಿಬ್ಬಂದಿಯಲ್ಲಿ ಕಾರ್ಯಕ್ಷಮತೆ ಹಾಗೂ ಕರ್ತವ್ಯ ಪ್ರಜ್ಞೆಯನ್ನು ಇನ್ನಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಈ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗಿದೆ.



